ಮುಂಬೈ: ನಗರದ ಲಾಲ್‌ಬಾಗ್ ಪ್ರದೇಶದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 20 ಜನರು ಗಾಯಗೊಂಡಿರುವ ದುರಂತ ಇಂದು (ಭಾನುವಾರ) ಸಂಭವಿಸಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಬೃಹನ್‌ಮುಂಬೈ ಮಹಾನಗರ ಪಾಲಿಕೆ ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.
ಗಾಯಾಳುಗಳನ್ನು ಕಿಂಗ್ ಎಡ್ವರ್ಡ್ ಮೆಮೋರಿಯಲ್ (ಕೆಇಎಂ) ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ಸ್ಥಿತಿ ವಿಚಾರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.