ADVERTISEMENT

ಮಹಾರಾಷ್ಟ್ರ: ಕಾರ್ಖಾನೆಯಲ್ಲಿ ಸ್ಫೋಟ; ಓರ್ವ ಕಾರ್ಮಿಕ ಸಾವು, 4 ಮಂದಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಸೆಪ್ಟೆಂಬರ್ 2021, 8:31 IST
Last Updated 4 ಸೆಪ್ಟೆಂಬರ್ 2021, 8:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದ ಬೋಯಿಸಾರ್‌ನ ಕಾರ್ಖಾನೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ಓರ್ವ ಕಾರ್ಮಿಕ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೋಯಿಸಾರ್‌ ಕೈಗಾರಿಕಾ ಪ್ರದೇಶದಲ್ಲಿ ಸ್ಥಿತಗೊಂಡಿರುವ ಜಖರಿಯಾ ಫ್ಯಾಬ್ರಿಕ್ ಲಿಮಿಟೆಡ್‌ನಲ್ಲಿ ಶನಿವಾರ ಬೆಳಗ್ಗೆ 6 ಗಂಟೆ ವೇಳೆಗೆ ಸ್ಫೋಟ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಗೆ ನೇತೃತ್ವ ವಹಿಸಿದ್ದಾರೆ.

ಸ್ಫೋಟದಿಂದಾಗಿ ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ತಕ್ಷಣಕ್ಕೆ ಘಟನೆ ಹಿಂದಿನ ಕಾರಣಗಳು ತಿಳಿದು ಬಂದಿಲ್ಲ.

ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.