ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೊಯಿಸಾರ್ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕಘಟಕದಲ್ಲಿ ಶನಿವಾರ ರಾತ್ರಿ ಸುಮಾರು 11.30ರ ವೇಳೆಗೆ ಸ್ಫೋಟ ಸಂಭವಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಬಳಿಕ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಸ್ಫೋಟದಿಂದಾಗಿ ಐವರುಕಾರ್ಮಿಕರಿಗೆ ಸುಟ್ಟ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೊಯಿಸರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸ್ಫೋಟದ ಹಿಂದಿನ ಕಾರಣಗಳು ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.