ADVERTISEMENT

ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಪ್ರವಾಹ: ಜೂನ್‌ ತಿಂಗಳಲ್ಲಿಯೇ 76 ಜನರ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಜುಲೈ 2022, 11:06 IST
Last Updated 10 ಜುಲೈ 2022, 11:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದಲ್ಲಿ ಜೂನ್ 1 ರಿಂದ ಈವರೆಗೆ ಒಟ್ಟು 76 ಜನರು ಮಳೆ ಸಂಬಂಧಿತ ದುರ್ಘಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 9 ಮಂದಿ ಮೃತಪಟ್ಟಿದ್ದು, ಜೂನ್ 1 ರಿಂದ (ಈವರೆಗೆ) ಒಟ್ಟು 76 ಜನರು ಅಸುನೀಗಿದ್ದಾರೆ

ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾಹಿತಿ ಪ್ರಕಾರ, ಮಳೆಯಿಂದಾಗಿ 838 ಮನೆಗಳಿಗೆ ಹಾನಿಯಾಗಿದೆ. 4,916 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪುನರ್ವಸತಿ ಇಲಾಖೆಯಿಂದ 35 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ.

ADVERTISEMENT

ಜೂನ್ 1 ರಿಂದ ಮಹಾರಾಷ್ಟ್ರದಲ್ಲಿ ಮಳೆ ಹಾಗೂ ಪ್ರವಾಹ ಸಂಬಂಧಿತ ಘಟನೆಗಳಲ್ಲಿ 125 ಪ್ರಾಣಿಗಳು ಪ್ರಾಣ ಕಳೆದುಕೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.