ಮುಂಬೈ: ಮಹಾರಾಷ್ಟ್ರದ ಅಡ್ವೊಕೇಟ್ ಜನರಲ್ (ಎಜಿ) ಡಾ.ಬಿರೇಂದ್ರ ಸರಾಫ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಮೀಸಲಾತಿ ವಿಚಾರದಲ್ಲಿ ಕಾನೂನಾತ್ಮಕ ಸವಾಲುಗಳು ಎದುರಾಗಿರುವ ಸಂದರ್ಭದಲ್ಲಿಯೇ ಅವರು ರಾಜೀನಾಮೆ ನೀಡಿದ್ದಾರೆ.
ವೈಯಕ್ತಿಕ ಕಾರಣಗಳಿಂದ ಎಜಿ ಹುದ್ದೆಗೆ ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ವಾರದ ಸಂಪುಟ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೆಂದ್ರ ಫಡಣವೀಸ್ ಅವರು ಡಾ.ಸರಾಫ್ ಅವರ ರಾಜೀನಾಮೆ ವಿಚಾರವನ್ನು ತಿಳಿಸಿದರು. ಸರಾಫ್ ಅವರ ರಾಜೀನಾಮೆಯನ್ನು ಸ್ವೀಕರಿಸಲಾಗಿದೆ ಎಂದು ಅವರು ಹೇಳಿದರು. ಸರಾಫ್ ಅವರು 2022ರ ಡಿಸೆಂಬರ್‌ನಿಂದ ಎಜಿ ಆಗಿ ಸೇವೆ ಸಲ್ಲಿಸುತ್ತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.