ADVERTISEMENT

ಮಹಾರಾಷ್ಟ್ರ, ಹರಿಯಾಣ ಚುನಾವಣೆ ಮತ ಎಣಿಕೆ ಆರಂಭ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2019, 2:49 IST
Last Updated 24 ಅಕ್ಟೋಬರ್ 2019, 2:49 IST
   

ನವದೆಹಲಿ: ಮಹಾರಾಷ್ಟ್ರ, ಹರಿಯಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಗುರುವಾರ (ಅ.24) ಪ್ರಕಟವಾಗಲಿದೆ. ಬೆಳಿಗ್ಗೆ 8ಕ್ಕೆ ಮತ ಎಣಿಕೆ ಆರಂಭ ವಾಗಲಿದ್ದು, ಮಧ್ಯಾಹ್ನದ ವೇಳೆಗೆ ಸ್ಪಷ್ಟಚಿತ್ರಣ ದೊರೆಯುವ ನಿರೀಕ್ಷೆ ಇದೆ.

ಎರಡೂ ಕಡೆ ಸೋಮವಾರ ಮತದಾನ ನಡೆದಿತ್ತು. ಮಹಾರಾಷ್ಟ್ರದಲ್ಲಿ ಶೇ 61.1ರಷ್ಟು, ಹರಿಯಾಣದಲ್ಲಿ ಶೇ 62.64ರಷ್ಟು ಮತದಾನ ಆಗಿತ್ತು.

ಮಹಾರಾಷ್ಟ್ರ, ಹರಿಯಾಣ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಯನ್ನು www.prajavani.net ಹಾಗೂ ಪ್ರಜಾವಾಣಿ ಸಾಮಾಜಿಕ ಮಾಧ್ಯಮಗಳಲ್ಲಿ ನೋಡಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.