ADVERTISEMENT

ಬಾಲರಾಮ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ಮಹಾರಾಷ್ಟ್ರ, ಪುದುಚೇರಿಯಲ್ಲಿ ರಜೆ

ಪಿಟಿಐ
Published 19 ಜನವರಿ 2024, 12:56 IST
Last Updated 19 ಜನವರಿ 2024, 12:56 IST
<div class="paragraphs"><p>ರಾಮ ಮಂದಿರ</p></div>

ರಾಮ ಮಂದಿರ

   

– ಸಾಂದರ್ಭಿಕ ಚಿತ್ರ (ಪಿಟಿಐ)

ನವದೆಹಲಿ: ಇದೇ 22 ರಂದು ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶ ಪುದುಚೇರಿ ಹಾಗೂ ಮಹಾರಾಷ್ಟ್ರ ಸರ್ಕಾರಗಳು ಸಾರ್ವತ್ರಿಕ ರಜೆ ಘೋಷಣೆ ಮಾಡಿದೆ

ADVERTISEMENT

ಈ ಬಗ್ಗೆ ಮಹಾರಾಷ್ಟ್ರ ಮತ್ತು ಪುದುಚೇರಿ ಸರ್ಕಾರಗಳು ಅಧಿಕೃತ ಪ್ರಕಟಣೆ ಹೊರಡಿಸಿವೆ. ಆ ದಿನ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಧಾರ್ಮಿಕ ಆಚರಣೆಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ನೌಕರರಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ. 

ಸೋಮವಾರ (ಜ.22ರಂದು) ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯ ಯಜಮಾನರಾಗಿ ಗರ್ಭಗುಡಿಯಲ್ಲಿ ಬಾಲ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮಾಡಲಿದ್ದಾರೆ.

ರಜೆ ಘೋಷಣೆ ಕುರಿತು ಸಾರ್ವಜನಿಕರಿಂದ ದೊಡ್ಡ ಬೇಡಿಕೆಯಿತ್ತು. ಜನರ ಭಾವನೆಗಳಿಗೆ ಬೆಲೆಕೊಟ್ಟು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಎರಡು ಸರ್ಕಾರಗಳು ತಿಳಿಸಿವೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.