ಬಂಧನ
(ಸಾಂದರ್ಭಿಕ ಚಿತ್ರ)
ಮುಂಬೈ: ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಒಂಬತ್ತು ಪ್ರಜೆಗಳನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.
ಇದರೊಂದಿಗೆ ಡಿಸೆಂಬರ್‌ನಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದ 43 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ನಾಲ್ಕು ದಿನಗಳಲ್ಲಿ ಮುಂಬೈ, ನಾಸಿಕ್, ನಾಂದೇಡ್ ಮತ್ತು ಛತ್ರಪತಿ ಸಂಭಾಜಿ ನಗರದಲ್ಲಿ ಸ್ಥಳೀಯ ಪೊಲೀಸರ ಸಹಾಯದಿಂದ ಕಾರ್ಯಾಚರಣೆ ನಡೆಸಲಾಯಿತು.
ಬಂಧಿತರಲ್ಲಿ ಓರ್ವ ಮಹಿಳೆ ಸೇರಿದ್ದಾರೆ. ನಕಲಿ ದಾಖಲೆಗಳನ್ನು ಬಳಸಿ ಆಧಾರ್ ಕಾರ್ಡ್ ಪಡೆಯಲಾಗಿದೆ. ಸರಿಯಾದ ದಾಖಲೆಗಳಿಲ್ಲದೆ ಅಕ್ರಮವಾಗಿ ನೆಲೆಸಿದ್ದರು. ಆರೋಪಿಗಳ ವಿರುದ್ಧ ವಿದೇಶಿ ಕಾಯ್ದೆ ಸೇರಿದಂತೆ ವಿವಿಧ ಕಾನೂನಿನ ಅಡಿಯಲ್ಲಿ ಐದು ಪ್ರಕರಣಗಳನ್ನು ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.