ADVERTISEMENT

ಮಹಾರಾಷ್ಟ್ರ: ಔರಂಗಜೇಬ್‌ ಪೋಸ್ಟರ್‌ ಪ್ರದರ್ಶನ, ನಾಲ್ವರ ವಿರುದ್ಧ ಪ್ರಕರಣ ದಾಖಲು

ಪಿಟಿಐ
Published 6 ಜೂನ್ 2023, 6:01 IST
Last Updated 6 ಜೂನ್ 2023, 6:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಮೆರವಣಿಗೆಯೊಂದರಲ್ಲಿ ಮೊಘಲ್‌ ದೊರೆ ಔರಂಗಜೇಬ್‌ನ ಪೋಸ್ಟರ್‌ಗಳನ್ನು ಪ್ರದರ್ಶಿಸಿದ ಆರೋಪದ ಮೇಲೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‌ಭಾನುವಾರ ಬೆಳಗ್ಗೆ 9 ಗಂಟೆಗೆ ಫಕೀರ್‌ವಾಡಾ ಪ್ರದೇಶದಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಸಂಗೀತ ಮತ್ತು ನೃತ್ಯದ ನಡುವೆ, ನಾಲ್ವರು ಔರಂಗಜೇಬ್‌ನ ಭಿತ್ತಿಪತ್ತಗಳನ್ನು ಪ್ರದರ್ಶಿಸಿದ್ದರು.

ಒಂದು ಸಮುದಾಯವನ್ನು ಮತ್ತೊಂದು ಸಮುದಾಯದ ವಿರುದ್ಧ ಸಂಘರ್ಷ ಮಾಡುವಂತೆ ಪ್ರೇರೇಪಿಸುವ ಉದ್ದೇಶ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಸಂಬಂಧ ನಾಲ್ವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ADVERTISEMENT

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಇಂತಹ ಕೃತ್ಯಗಳನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.

ನಮ್ಮ ರಾಜ್ಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು ಛತ್ರಪತಿ ಸಂಭಾಜಿ ಮಹಾರಾಜರು ನಮ್ಮ ದೇವರುಗಳು. ಯಾರಾದರೂ ಔರಂಗಜೇಬ್‌ನ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರೆ ಸಹಿಸಲಾಗುವುದಿಲ್ಲ ಎಂದು ದೇವೇಂದ್ರ ಫಡಣವೀಸ್ ಹೇಳಿದ್ದಾರೆ.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಮಹಾರಾಷ್ಟ್ರ ಘಟಕದ ಮುಖ್ಯಸ್ಥ ಜಯಂತ್ ಪಾಟೀಲ್ ಅವರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇಂತಹ ಘಟನೆಗಳು ಬೆಳಕಿಗೆ ಬಂದಾಗ ಸರ್ಕಾರವು ಕಠಿಣ ಕ್ರಮದ ದೊಡ್ಡ ಸಮರ್ಥನೆಗಳನ್ನು ಮಾಡುತ್ತದೆ, ಆದರೆ ಕಾರ್ಯನಿರ್ವಹಿಸುವಲ್ಲಿ ವಿಫಲವಾಗಿದೆ ಎಂದು ಶಿವಸೇನಾ (ಯುಬಿಟಿ) ವಿಧಾನ ಪರಿಷತ್ ಸದಸ್ಯ ಅಂಬಾದಾಸ್ ದಾನ್ವೆ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.