ಮುಂಬೈ: ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಬಂಧನದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಶಾಸಕ ರಾಮ್ ಕದಮ್ ಅವರು ಗುರುವಾರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ಭೇಟಿಯಾಗಿದ್ದಾರೆ.
ಗೋಸ್ವಾಮಿ ಅವರನ್ನು ಬಂಧಿಸಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ರಾಮ್ ಕದಮ್ ಮನವಿ ಮಾಡಿದ್ದಾರೆ.
ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸಿಐಡಿ ತಂಡವು ಬುಧವಾರ ವಶಕ್ಕೆ ಪಡೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.