ADVERTISEMENT

ಮಹಾರಾಷ್ಟ್ರ BJP ಉಪಾಧ್ಯಕ್ಷ ಕಿರಿಟ್ ಸೋಮಯ್ಯ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಬಹಿರಂಗ

ಮಹಾರಾಷ್ಟ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಲೋಕಸಭಾ ಸದಸ್ಯ ಕಿರಿಟ್ ಸೋಮಯ್ಯ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಸ್ಥಳೀಯ ಮಾರಾಠಿ ನ್ಯೂಸ್ ಚಾನಲ್‌ಗಳಲ್ಲಿ ಪ್ರಸಾರವಾಗಿವೆ.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಜುಲೈ 2023, 10:22 IST
Last Updated 18 ಜುಲೈ 2023, 10:22 IST
ಕಿರಿಟ್ ಸೋಮಯ್ಯ, ಬಲ ಚಿತ್ರದಲ್ಲಿ ಕಿರಿಟ್ ಸೋಮಯ್ಯ ಎನ್ನಲಾದ ವ್ಯಕ್ತಿ
ಕಿರಿಟ್ ಸೋಮಯ್ಯ, ಬಲ ಚಿತ್ರದಲ್ಲಿ ಕಿರಿಟ್ ಸೋಮಯ್ಯ ಎನ್ನಲಾದ ವ್ಯಕ್ತಿ   

ಮುಂಬೈ: ಮಹಾರಾಷ್ಟ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಲೋಕಸಭಾ ಸದಸ್ಯ ಕಿರಿಟ್ ಸೋಮಯ್ಯ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಸ್ಥಳೀಯ ಮಾರಾಠಿ ನ್ಯೂಸ್ ಚಾನಲ್‌ಗಳಲ್ಲಿ ಪ್ರಸಾರವಾಗಿವೆ.

ಈ ವಿಷಯ ಮಹಾರಾಷ್ಟ್ರದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಕಿರಿಟ್ ಸೋಮಯ್ಯ ಅವರ ಬಗ್ಗೆ ಟೀಕೆಗಳು ಕೇಳಿ ಬಂದಿವೆ. ದೂರುಗಳು ಕೂಡ ದಾಖಲಾಗಿವೆ.

ಆದರೆ, ಕಿರಿಟ್ ಸೋಮಯ್ಯ ಅವರು, ಈ ವಿಡಿಯೊ ನನ್ನದಲ್ಲ. ನನ್ನ ಹೆಸರಿನಲ್ಲಿ ತಿರುಚಿದ ವಿಡಿಯೊಗಳನ್ನು ಬಿತ್ತರಿಸಲಾಗಿದೆ. ನಾನು ಯಾವುದೇ ಮಹಿಳೆ ಅಥವಾ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿಲ್ಲ. ವಿಡಿಯೊ ಸತ್ಯಾಸತ್ಯತೆ ಬಗ್ಗೆ ತನಿಖೆ ಮಾಡಿ ಕ್ರಮ ಜರುಗಿಸಬೇಕು ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯೂ ಆಗಿರುವ ಗೃಹ ಸಚಿವ ದೇವೇಂದ್ರ ಫಡಣವೀಸ್ ಅವರಿಗೆ ಟ್ವೀಟ್ ಮೂಲಕ ದೂರು ನೀಡಿದ್ದಾರೆ.

ADVERTISEMENT

ವಿಡಿಯೊದಲ್ಲಿ ಕಿರಿಟ್ ಸೋಮಯ್ಯ ಎನ್ನಲಾದ ವ್ಯಕ್ತಿ ಯಾರೋ ಮಹಿಳೆಯೊಬ್ಬರ ಜೊತೆ ಅಶ್ಲೀಲವಾಗಿ ಮಾತನಾಡುತ್ತಾ ಅಶ್ಲೀಲ ಹಾವಭಾವ ಪ್ರದರ್ಶಿಸುತ್ತಾ, ಬೆತ್ತಲೆ ದೇಹ ಪ್ರದರ್ಶನ ಮಾಡಿರುವುದು ತೋರುತ್ತದೆ.

ಒಂದು ಬಾರಿ ಶಾಸಕ ಹಾಗೂ ಎರಡು ಸಾರಿ ಬಿಜೆಪಿಯಿಂದ ಲೋಕಸಭೆ ಸದಸ್ಯರಾಗಿದ್ದ ಕಿರಿಟ್ ಸೋಮಯ್ಯ ಅವರು ಮುಂಬೈ ಉತ್ತರ ಭಾಗದ ರಾಜಕಾರಣಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.