ಮುಂಬೈ: ರಾಸಾಯನಿಕ ಕಾರ್ಖಾನೆ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ಸೋಮವಾರ ಮಹಾರಾಷ್ಟ್ರದ ಪಲ್ಘಾರ್ ಪ್ರದೇಶದ ತಾರಾಪುರದಲ್ಲಿ ನಡೆದಿದೆ.
ಸ್ಫೋಟ ಸಂಭವಿಸಿದಾಗ ತಾರಾಪುರ ರಾಸಾಯನಿಕ ವಲಯದಲ್ಲಿರುವ ಸ್ಯಾನಿಟೈಸರ್ ಮತ್ತು ಹ್ಯಾಂಡ್ ವಾಶ್ ಘಟಕದಲ್ಲಿ 66 ಕಾರ್ಮಿಕರು ಕೆಲಸ ಮಾಡುತತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಿಗ್ಗೆ 11.30ಕ್ಕೆ ಭಾರಿ ಸ್ಫೋಟ ಸಂಭವಿಸಿದ ನಂತರ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.