
ಪ್ರಾತಿನಿಧಿಕ ಚಿತ್ರ
ನಾಗ್ಪುರ: ಮಹಾರಾಷ್ಟ್ರದ 12 ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ರಸಾಯನಶಾಸ್ತ್ರ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಘಟನೆ ಶನಿವಾರ ನಡೆದಿದೆ.
ವಿಷಯ ತಿಳಿದು ನಾಗ್ಪುರದ ಬಾಲಕಿಯರ ಖಾಸಗಿ ಕಾಲೇಜೊಂದಕ್ಕೆ ದೌಡಾಯಿಸಿದ ಅಧಿಕಾರಿಗಳು ಇಬ್ಬರು ಬಾಲಕಿಯರನ್ನು ತೀವ್ರ ವಿಚಾರಣೆ ನಡೆಸಿದ್ದಾರೆ.
ಈ ಇಬ್ಬರೂ ಬಾಲಕಿಯರು ಪದೇ ಪದೇ ಶೌಚಾಲಯಕ್ಕೆ ಹೋಗಿ ಬಂದ ನಂತರ ಇವರ ಮೇಲೆ ಅನುಮಾನಪಟ್ಟು ಪರೀಕ್ಷಾ ಮೇಲ್ವಿಚಾರಕರು ದೂರು ನೀಡಿದ್ದಾರೆ.
ಅಷ್ಟರಲ್ಲಾಗಲೇ ಪ್ರಶ್ನೆಪತ್ರಿಕೆ ವಾಟ್ಸ್‌ಆ್ಯಪ್ ಮುಖಾಂತರ ಸೋರಿಕೆಯಾಗಿದ್ದನ್ನು ಶಂಕೆ ವ್ಯಕ್ತಪಡಿಸಲಾಗಿದ್ದು, ಅಲ್ಲದೇ ಇದೇ ವಾಟ್ಸ್‌ಆ್ಯಪ್ ಗ್ರೂಪ್ ಮುಖಾಂತರ ಉತ್ತರಗಳೂ ಶೇರ್ ಆಗಿರುವುದನ್ನು ಪತ್ತೆ ಹಚ್ಚಿದ್ದಾರೆ.
ಹಣಕ್ಕಾಗಿ ಖಾಸಗಿ ಕೋಚಿಂಗ್ ಸೆಂಟರ್ ಒಂದರ ವ್ಯಕ್ತಿ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿರುವ ಸಂದೇಹವಿದ್ದು ಆತನ ಪತ್ತೆಗೆ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ನಾಗ್ಪುರದ ಸಾದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೆತ್ತಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.