ಠಾಣೆ : ಕೆರೆಯಲ್ಲಿ ಈಜಲು ಹೋಗಿದ್ದ 12 ವರ್ಷದ ಬಾಲಕನೊಬ್ಬ ಕೆರೆಯ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಹಾರಾಷ್ಟದ ಠಾಣೆ ನಗರದಲ್ಲಿ ನಡೆದಿದೆ.
ಕಾಸರ್ವಾಡವಲಿ ಪ್ರದೇಶದಲ್ಲಿ ಘಟನೆ ನಡೆದಿದೆ. ವಾಘ್ಬಿಲ್ ಪ್ರದೇಶದ ನಿವಾಸಿಯಾದ ಪಿಯೂಷ್ ಗಜಾನನ್ ಸೋನಾವಾನೆ (12) ಈಜಲೆಂದು ಕೆರೆಗೆ ಇಳಿದಿದ್ದಾನೆ. ಆಗ ಇದ್ದಕ್ಕಿಂದಂತೆ ನೀರಿನಲ್ಲಿ ಮುಳುಗಿದ್ದಾನೆ ಎಂದು ನಾಗರಿಕ ವಿಪತ್ತು ನಿರ್ವಹಣಾಧಿಕಾರಿ ಯಾಸಿನ್ ತಡ್ವಿ ತಿಳಿಸಿದ್ದಾರೆ.
ವಿಪತ್ತು ನಿರ್ವಹಣಾ ಪಡೆ ಹಾಗೂ ಅಗ್ನಿಶಾಮಕ ದಳದ ಜಂಟಿ ಕಾರ್ಯಾಚರಣೆಯಲ್ಲಿ ನೀರಿನಲ್ಲಿ ಮುಳುಗಿದ್ದ ಬಾಲಕನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಲಾಯಿತು. ಬಾಲಕ ಸಾವನ್ನಪ್ಪಿರುವುದಾಗಿ ವೈದ್ಯರು ಧೃಢಪಡಿಸಿದ್ದಾರೆ. ಅಸಹಜ ಸಾವು ಎಂದು ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.