ADVERTISEMENT

18 ತಾಸಿನ ಬಳಿಕ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ

ಪಿಟಿಐ
Published 30 ಏಪ್ರಿಲ್ 2023, 9:36 IST
Last Updated 30 ಏಪ್ರಿಲ್ 2023, 9:36 IST
ಎರಡು ಅಂತಸ್ತಿನ ಕಟ್ಟಡ ಕುಸಿತ
ಎರಡು ಅಂತಸ್ತಿನ ಕಟ್ಟಡ ಕುಸಿತ   ಚಿತ್ರ: ಪಿಟಿಐ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟಿದ್ದಾರೆ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಬಳಿಕ ನಡೆಸಿದ ರಕ್ಷಣಾ ಕಾರ್ಯಾಚರಣೆಯಲ್ಲಿ 18 ತಾಸಿನ ಬಳಿಕ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಇನ್ನೂ ಒಂಬತ್ತು ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ.

ADVERTISEMENT

ವಲ್ಪಾಡಾ ಪ್ರದೇಶದಲ್ಲಿ ವರ್ಧಮಾನ್ ಕಂಪೌಂಡ್‌ನಲ್ಲಿದ್ದ ಕಟ್ಟಡ ಶನಿವಾರ ಮಧ್ಯಾಹ್ನ 1.45ರ ಹೊತ್ತಿಗೆ ಕುಸಿದಿತ್ತು.

ಸತತ ರಕ್ಷಣಾ ಕಾರ್ಯಾಚರಣೆ ಬಳಿಕ ಭಾನುವಾರ ಬೆಳಿಗ್ಗೆ 8ರ ಹೊತ್ತಿಗೆ 38 ವರ್ಷದ ಸುನಿಲ್ ಪಿಸ ಎಂಬವರನ್ನು ರಕ್ಷಿಸಲಾಗಿದೆ.

ಗಾಯಾಳುಗಳಿಗೆ ಭಿವಂಡಿಯ ಐಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.