ADVERTISEMENT

ಕುಣಬಿ ಜಾತಿ ಪ್ರಮಾಣಪತ್ರ: ವರದಿ ಅಂಗೀಕರಿಸಿದ ಮಹಾರಾಷ್ಟ್ರ ಸಚಿವ ಸಂಪುಟ

ಪಿಟಿಐ
Published 30 ಸೆಪ್ಟೆಂಬರ್ 2024, 12:43 IST
Last Updated 30 ಸೆಪ್ಟೆಂಬರ್ 2024, 12:43 IST
ಏಕನಾಥ ಶಿಂದೆ
ಏಕನಾಥ ಶಿಂದೆ   

ಮುಂಬೈ: ಮಹಾರಾಷ್ಟ್ರದಲ್ಲಿ ಅರ್ಹ ಮರಾಠರಿಗೆ ಕುಣಬಿ ಜಾತಿ ಪ್ರಮಾಣಪತ್ರ ನೀಡಲು ಅನುಸರಿಸಬೇಕಾದ ಪ್ರಮಾಣಿತ ಕಾರ್ಯಾಚರಣೆ ವಿಧಾನವನ್ನು (ಎಸ್‌ಒಪಿ) ಅಂತಿಮಗೊಳಿಸಲು ರಚಿಸಲಾದ ನ್ಯಾಯಮೂರ್ತಿ ಶಿಂದೆ ಸಮಿತಿಯು ಸಲ್ಲಿಸಿರುವ ಎರಡು ಮತ್ತು ಮೂರನೇ ವರದಿಗಳನ್ನು ಮಹಾರಾಷ್ಟ್ರ ಸಚಿವ ಸಂಪುಟ ಸೋಮವಾರ ಅಂಗೀಕರಿಸಿದೆ.

ಮಹಾರಾಷ್ಟ್ರದಲ್ಲಿ ಕುಣಬಿ ಸಮುದಾಯವನ್ನು ಇತರೆ ಹಿಂದುಳಿದ ವರ್ಗಗಳ (ಒಬಿಸಿ) ವಿಭಾಗದ ಅಡಿಯಲ್ಲಿ ವರ್ಗೀಕರಿಸಲಾಗಿದೆ. ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಸರ್ಕಾರ ಸರಣಿ ಸಂಪುಟ ಸಭೆಗಳನ್ನು ನಡೆಸುತ್ತಿದೆ. ಸೋಮವಾರ ನಡೆದ ಸಭೆಯು 38 ಪ್ರಸ್ತಾವಗಳಿಗೆ ಅನುಮೋದನೆ ನೀಡಿದೆ.

ನಿವೃತ್ತ ನ್ಯಾಯಮೂರ್ತಿ ಸಂದೀಪ್‌ ಶಿಂದೆ ಸಮಿತಿಯು ತನ್ನ ಎರಡನೇ ವರದಿಯನ್ನು ಕಳೆದ ವರ್ಷದ ಡಿಸೆಂಬರ್‌ನಲ್ಲಿ ಸಲ್ಲಿಸಿತ್ತು. ಸರ್ಕಾರವು ಅದನ್ನು ಅಧಿಕೃತವಾಗಿ ಅಂಗೀಕರಿಸಿರಲಿಲ್ಲ.

ADVERTISEMENT

ವರದಿಯನ್ನು ಈಗ ಅಂಗಿಕರಿಸಿರುವುದು, ಒಬಿಸಿ ಪ್ರವರ್ಗದಲ್ಲಿ ಮೀಸಲಾತಿ ನೀಡಬೇಕು ಎಂಬ ಆಗ್ರಹದೊಂದಿಗೆ ಹೋರಾಟ ನಡೆಸುತ್ತಿರುವ ಮರಾಠ ಸಮುದಾಯವನ್ನು ಸಮಾಧಾನಪಡಿಸಲು ಸರ್ಕಾರ ಇಟ್ಟಿರುವ ಮಹತ್ವದ ಹೆಜ್ಜೆ ಎಂದು ವಿಶ್ಲೇಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.