ಮುಂಬೈ: ರೈತರಿಗೆ ಒಂದು ಕ್ವಿಂಟಲ್ ಭತ್ತಕ್ಕೆ ಹೆಚ್ಚುವರಿಯಾಗಿ ₹700 ನೀಡಲು ಮಹಾರಾಷ್ಟ್ರ ಸಚಿವ ಸಂಪುಟ ನಿರ್ಧರಿಸಿದೆ.
ಮಂಗಳವಾರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ ಸಿಂಧುದುರ್ಗ್ ಜಿಲ್ಲೆಯಲ್ಲಿ 100 ಆಸನಗಳ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.