ಅಪಘಾತ
–ಪ್ರಾತಿನಿಧಿಕ ಚಿತ್ರ
ಮುಂಬೈ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಸಿಕ್ ಜಿಲ್ಲೆಯ ವಾಣಿ-ದಿಂಡೋರಿ ಹೆದ್ದಾರಿಯಲ್ಲಿ ಬುಧವಾರ ರಾತ್ರಿ 11.57 ಗಂಟೆಗೆ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಎರಡು ವಾಹನಗಳು ರಸ್ತೆಯ ಪಕ್ಕದಲ್ಲಿರುವ ಕಾಲುವೆಯಲ್ಲಿ ಬಿದ್ದಿರುವುದು ಕಂಡುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.