ADVERTISEMENT

ಬಂಡಾಯ ಶಾಸಕರು ಚುನಾವಣೆಯಲ್ಲಿ ಸೋತರೆ ರಾಜಕೀಯ ತ್ಯಜಿಸುವೆ: ಏಕನಾಥ ಶಿಂಧೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಜುಲೈ 2022, 14:52 IST
Last Updated 15 ಜುಲೈ 2022, 14:52 IST
ಏಕನಾಥ ಶಿಂಧೆ – ಐಎಎನ್‌ಎಸ್ ಚಿತ್ರ
ಏಕನಾಥ ಶಿಂಧೆ – ಐಎಎನ್‌ಎಸ್ ಚಿತ್ರ   

ಮುಂಬೈ: ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ನಡುವಣ ಮುಸುಕಿನ ಗುದ್ದಾಟ ಮುಂದುವರಿದಿದೆ.

ತಮ್ಮ ಜತೆಗಿರುವ ಶಾಸಕರು (ಶಿವಸೇನಾ ಬಂಡಾಯ) ಮುಂದಿನ ಚುನಾವಣೆಯಲ್ಲಿ ಸೋತರೆ ರಾಜಕೀಯ ತ್ಯಜಿಸುವೆ ಎಂದು ಏಕನಾಥ ಶಿಂಧೆ ಹೇಳಿದ್ದಾರೆ.

‘ಈ 50 ಮಂದಿ ಶಾಸಕರು ಮುಂದಿನ ಚುನಾವಣೆಯಲ್ಲಿ ಗೆಲ್ಲುವ ಬಗ್ಗೆ ನನಗೆ ಖಾತರಿ ಇದೆ. ಅವರಲ್ಲಿ ಯಾರಾದರೂ ಒಬ್ಬರು ಸೋತರೆ, ರಾಜಕೀಯ ತ್ಯಜಿಸುತ್ತೇನೆ’ ಎಂದು ಶಿಂಧೆ ಹೇಳಿದ್ದಾರೆ.

ವಿಶ್ವಾಸಮತ ಯಾಚನೆ ಸಂದರ್ಭದಲ್ಲಿಯೂ ಶಿಂಧೆ ಇದೇ ರೀತಿಯ ಹೇಳಿಕೆ ನೀಡಿದ್ದರು.

ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ಇತ್ತೀಚೆಗೆ ಬಂಡಾಯವೆದ್ದಿದ್ದ ಶಿಂಧೆ, ಸರ್ಕಾರದ ಪತನಕ್ಕೆ ಕಾರಣವಾಗಿದ್ದರು. ಬಳಿಕ ಬಿಜೆಪಿ ಜತೆ ಕೈಜೋಡಿಸಿ ಸರ್ಕಾರ ರಚಿಸಿ ಮುಖ್ಯಮಂತ್ರಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.