ADVERTISEMENT

ಮರಾಠಾ ಮೀಸಲಾತಿಗಾಗಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಉದ್ಧವ್‌ ಠಾಕ್ರೆ

ಜಿಎಸ್‌ಟಿ ಪರಿಹಾರ ಕುರಿತೂ ಚರ್ಚೆ

ಪಿಟಿಐ
Published 8 ಜೂನ್ 2021, 9:12 IST
Last Updated 8 ಜೂನ್ 2021, 9:12 IST
ಉದ್ಧವ್‌ ಠಾಕ್ರೆ, ಪಿಟಿಐ ಚಿತ್ರ
ಉದ್ಧವ್‌ ಠಾಕ್ರೆ, ಪಿಟಿಐ ಚಿತ್ರ   

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಗಳವಾರ ಭೇಟಿ ಮಾಡಿದರು.

‘ಮರಾಠಾ ಸಮುದಾಯಕ್ಕೆ ಮೀಸಲಾತಿ ನೀಡುವುದು, ಮೆಟ್ರೊ ಕಾರ್‌ ಶೆಡ್‌ ನಿರ್ಮಾಣ ಯೋಜನೆ ಹಾಗೂ ಜಿಎಸ್‌ಟಿ ಪರಿಹಾರ ಕುರಿತು ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಲಾಯಿತು’ ಎಂದು ಠಾಕ್ರೆ ತಿಳಿಸಿದರು.

‘ಮರಾಠಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆ ಇನ್ನೂ ಈಡೇರಿಲ್ಲ. ಈ ಕುರಿತು ಸಹ ಪ್ರಧಾನಿ ಅವರೊಂದಿಗೆ ಚರ್ಚಿಸಲಾಯಿತು. ಎಲ್ಲ ವಿಷಯಗಳ ಕುರಿತು ಕ್ರಮ ಕೈಗೊಳ್ಳುವ ಭರವಸೆಯನ್ನು ಪ್ರಧಾನಿ ನೀಡಿದರು’ ಎಂದು ಹೇಳಿದರು.

ADVERTISEMENT

‘ಮೆಟ್ರೊ ಕಾರ್‌ ಶೆಡ್‌ ಅನ್ನು ಕಂಜೂರ್‌ನಲ್ಲಿ ನಿರ್ಮಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಈ ಬಗ್ಗೆಯೂ ಚರ್ಚಿಸಲಾಯಿತು’ ಎಂದರು.

ಕಂಜೂರ್‌ ಪ್ರದೇಶದಲ್ಲಿ ಮೆಟ್ರೊ ಕಾರ್‌ ಶೆಡ್‌ ನಿರ್ಮಾಣಕ್ಕಾಗಿ ಗುರುತಿಸಿರುವ ಜಾಗ ತಮಗೇ ಸೇರಿದ್ದು ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೇಳುತ್ತಿರುವುದು ಬಿಕ್ಕಟ್ಟಿಗೆ ಕಾರಣವಾಗಿದೆ.

ಉಪಮುಖ್ಯಮಂತ್ರಿ ಅಜಿತ್‌ ಪವಾರ್‌, ಕಾಂಗ್ರೆಸ್‌ನಹಿರಿಯ ಮುಖಂಡ ಅಶೋಕ್‌ ಚವ್ಹಾಣ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.