ADVERTISEMENT

ಮಹಾರಾಷ್ಟ್ರ ಕಾಂಗ್ರೆಸ್ ಕಾರ್ಯಾಧ್ಯಕ್ಷ ಬಸವರಾಜ್ ರಾಜೀನಾಮೆ:BJP ಸೇರ್ಪಡೆ ಸಾಧ್ಯತೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಫೆಬ್ರುವರಿ 2024, 5:48 IST
Last Updated 27 ಫೆಬ್ರುವರಿ 2024, 5:48 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮುಂಬೈ: ಕಾಂಗ್ರೆಸ್ ನಾಯಕ ಬಸವರಾಜ ಪಾಟೀಲ್ ಅವರು ಇಂದು (ಮಂಗಳವಾರ) ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಅವರು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಬಾವನಕುಲೆ ದೇವೇಂದ್ರ ಫಡಣವೀಸ್‌ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಲಿದ್ದಾರೆ ಎಂದು ತಿಳಿದುಬಂದಿದೆ.

ADVERTISEMENT

ಬಿಜೆಪಿಗೆ ಸೇರ್ಪಡೆಯಾಗುವ ಕುರಿತು ಬಸವರಾಜ ಪಾಟೀಲ್ ಅವರು ಇಂದು ಬೆಳಿಗ್ಗೆ ದೇವೇಂದ್ರ ಫಡಣವೀಸ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದ ಪ್ರಮುಖ ಲಿಂಗಾಯತ ನಾಯಕರಾಗಿರುವ ಬಸವರಾಜ ಪಾಟೀಲ ಅವರು ಔಸಾ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2019ರಲ್ಲಿ ಬಿಜೆಪಿ ನಾಯಕ ಅಭಿಮನ್ಯು ಪವಾರ್ ವಿರುದ್ಧ ಪಾಟೀಲ್ ಸೋಲು ಕಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.