ADVERTISEMENT

ಮಹಾರಾಷ್ಟ್ರದಲ್ಲಿ ಲಾಕ್‌ಡೌನ್ 15 ದಿನ ವಿಸ್ತರಣೆ: ಸಚಿವ ರಾಜೇಶ್ ಟೊಪೆ

ಪಿಟಿಐ
Published 28 ಏಪ್ರಿಲ್ 2021, 12:55 IST
Last Updated 28 ಏಪ್ರಿಲ್ 2021, 12:55 IST
ಸಾಂದರ್ಭಿಕ ಚಿತ್ರ (ಪಿಟಿಐ)
ಸಾಂದರ್ಭಿಕ ಚಿತ್ರ (ಪಿಟಿಐ)   

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್‌ ಹರಡುವಿಕೆ ತಡೆಗೆ ಘೋಷಿಸಲಾಗಿರುವ ಲಾಕ್‌ಡೌನ್‌ ಅನ್ನು ಏಪ್ರಿಲ್ 30ರ ಬಳಿಕವೂ 15 ದಿನ ವಿಸ್ತರಿಸಲಾಗುವುದು ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಬುಧವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾಗಿಯಾದ ಎಲ್ಲರೂ ಲಾಕ್‌ಡೌನ್ ವಿಸ್ತರಿಸುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಕೋವಿಡ್ ಪ್ರಕರಣಗಳು ವಿಪರೀತವಾಗಿ ಹೆಚ್ಚುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರವು ಏಪ್ರಿಲ್ 4ರಿಂದ ವಾರಾಂತ್ಯ ಲಾಕ್‌ಡೌನ್‌ ಮತ್ತು ವಾರದ ದಿನಗಳಲ್ಲಿ ರಾತ್ರಿ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಿತ್ತು. ಖಾಸಗಿ ಕಚೇರಿಗಳು, ಸಲೂನ್‌ಗಳು, ಚಿತ್ರಮಂದಿರಗಳನ್ನು ಮುಚ್ಚುವಂತೆ ಸೂಚಿಸಿತ್ತು.

ಸದ್ಯ ವಾರಾಂತ್ಯ ಲಾಕ್‌ಡೌನ್ ಶುಕ್ರವಾರ ರಾತ್ರಿ 8 ಗಂಟೆಗೆ ಆರಂಭಗೊಂಡು ಸೋಮವಾರ ಬೆಳಿಗ್ಗೆ 7 ಗಂಟೆವರೆಗೆ ಜಾರಿಯಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.