ADVERTISEMENT

ಮುಂಬೈ ನಗರದಲ್ಲಿ ಒಂದೇ ದಿನ 10,860 ಕೋವಿಡ್ ಪ್ರಕರಣಗಳು ದೃಢ

​ಪ್ರಜಾವಾಣಿ ವಾರ್ತೆ
Published 4 ಜನವರಿ 2022, 14:46 IST
Last Updated 4 ಜನವರಿ 2022, 14:46 IST
ಎಎಫ್‌ಪಿ ಚಿತ್ರ
ಎಎಫ್‌ಪಿ ಚಿತ್ರ   

ಮುಂಬೈ: ದೇಶದಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಮಹಾರಾಷ್ಟ್ರದ ಮುಂಬೈ ನಗರದಲ್ಲಿ 24 ಗಂಟೆಗಳಲ್ಲಿ 10,860 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಇದರಲ್ಲಿ 834 ಸೋಂಕಿತರಿಗೆ ಆಸ್ಪತ್ರೆಗೆ ದಾಖಲಾಗಬೇಕಾದ ಅಗತ್ಯತೆ ಇದ್ದು, 52 ಮಂದಿಗೆ ಕೃತಕ ಆಮ್ಲಜನಕದ ಅಗತ್ಯವಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಕೋವಿಡ್ ಪ್ರಕರಣಗಳ ಹೆಚ್ಚಳಕ್ಕೆ ಅತ್ಯಂತ ವೇಗವಾಗಿ ಹರಡುವ ಕೊರೊನಾದ ಹೊಸ ತಳಿ ಓಮೈಕ್ರಾನ್ ಕಾರಣ ಎನ್ನಲಾಗುತ್ತಿದೆ.

ADVERTISEMENT

ಈ ಮಧ್ಯೆ, ಕೋವಿಡ್ ಪ್ರಕರಣಗಳ ಸುನಾಮಿಯನ್ನೂ ಎದುರಿಸಲು ದೇಶದ ವಾಣಿಜ್ಯ ರಾಜಧಾನಿ ಸಿದ್ಧವಾಗಿದೆ ಎಂದು ಮುಂಬೈ ಮೇಯರ್ ಕಿಶೋರಿ ಪಡ್ನೇಕರ್ ಅವರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

‘ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳನ್ನು ನಾವು ಪಾಲಿಸಿದ್ದೇವೆ. ಜಂಬೋ ಕ್ವಾರಂಟೈನ್ ಕೇಂದ್ರಗಳು ಸಿದ್ಧವಾಗಿವೆ’ ಎಂದಿದ್ದಾರೆ.

ಇನ್ನು, 24 ಗಂಟೆಗಳಲ್ಲಿ ಮಹಾರಾಷ್ಟ್ರ ರಾಜ್ಯದಾದ್ಯಂತ 18,466 ಹೊಸ ಪ್ರಕರಣಗಳು ದೃಢಪಟ್ಟಿದ್ದು, 20 ಸೋಂಕಿತರು ಸಾವಿಗೀಡಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 66,308ಕ್ಕೆ ಏರಿದ್ದು, ಓಮೈಕ್ರಾನ್ ಸಂಖ್ಯೆ 653ಕ್ಕೆ ಜಿಗಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.