ADVERTISEMENT

ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಪ್ರವಾಹ: ಜೂನ್‌ ತಿಂಗಳಲ್ಲಿಯೇ 89 ಜನರ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಜುಲೈ 2022, 9:13 IST
Last Updated 13 ಜುಲೈ 2022, 9:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದಲ್ಲಿ ಜೂನ್ 1 ರಿಂದ ಈವರೆಗೆ ಒಟ್ಟು 89 ಜನರು ಮಳೆ ಸಂಬಂಧಿತ ದುರ್ಘಟನೆಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ 5 ಮಂದಿ ಮೃತಪಟ್ಟಿದ್ದು, ಜೂನ್ 1 ರಿಂದ (ಈವರೆಗೆ) ಒಟ್ಟು 89 ಜನರು ಅಸುನೀಗಿದ್ದಾರೆ.

ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾಹಿತಿ ಪ್ರಕಾರ, ಮಳೆಯಿಂದಾಗಿ 1,412 ಮನೆಗಳಿಗೆ ಹಾನಿಯಾಗಿದೆ. 7,796 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪುನರ್ವಸತಿ ಇಲಾಖೆಯಿಂದ 35 ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದೆ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.