ADVERTISEMENT

ಮಹಾರಾಷ್ಟ್ರದ ಭಿವಾಂಡಿಯಲ್ಲಿ ಕಟ್ಟಡ ದುರಂತ: ಸಾವಿನ ಸಂಖ್ಯೆ 20ಕ್ಕೆ ಏರಿಕೆ

ಪಿಟಿಐ
Published 22 ಸೆಪ್ಟೆಂಬರ್ 2020, 6:27 IST
Last Updated 22 ಸೆಪ್ಟೆಂಬರ್ 2020, 6:27 IST
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿ ಸೋಮವಾರ ಕುಸಿದ ಮೂರು ಅಂತಸ್ತಿನ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸುತ್ತಿರುವ ರಕ್ಷಣಾ ಕಾರ್ಯಪಡೆಯವರು
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿ ಸೋಮವಾರ ಕುಸಿದ ಮೂರು ಅಂತಸ್ತಿನ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸುತ್ತಿರುವ ರಕ್ಷಣಾ ಕಾರ್ಯಪಡೆಯವರು   

ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿಯಲ್ಲಿ ಸಂಭವಿಸಿದ ಮೂರು ಮಹಡಿಗಳ ಕಟ್ಟಡ ಕುಸಿತದ ಸತ್ತಿರುವವರ ಸಂಖ್ಯೆ 20ಕ್ಕೆ ಏರಿಕೆ ಆಗಿದೆ.

ಸತತ 24 ಗಂಟೆಗಳ ನಂತರವೂ ರಕ್ಷಣಾ ಕಾರ್ಯ ಮುಂದುವರಿದಿದೆ. ಮೃತಪಟ್ಟಿರುವವರಲ್ಲಿ ಎಂಟು ಮಕ್ಕಳು ಸೇರಿದ್ದಾರೆ. ಸೋಮವಾರ ರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಕಲ್ಲು ಮಣ್ಣುಗಳ ಅಡಿ ಸಿಲುಕಿದ್ದ ಅಫ್ಸಾನಾ ಅನ್ಸಾರಿ ಎಂಬ 15 ವರ್ಷದ ಬಾಲಕಿಯ ದೇಹವನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದಾರೆ. ಇಲ್ಲಿವರೆಗೂ ಸುಮಾರು 23 ಮಂದಿಯನ್ನು ಅವಶೇಷಗಳಡಿಯಿಂದ ರಕ್ಷಿಸಲಾಗಿದೆ.

ಸೋಮವಾರ ಮುಂಜಾನೆ 3.40ರ ಸಮಯದಲ್ಲಿ 43 ವರ್ಷಗಳಷ್ಟು ಹಳೆಯದಾದ ಜಿಲಾನಿ ಕಟ್ಟಡ ಕುಸಿದಿದ್ದು, ಘಟನೆಯ ವೇಳೆಯಲ್ಲಿ 10 ಮಂದಿ ಮೃತಪಟ್ಟಿದ್ದರು. ಕಟ್ಟಡದ ಅವಶೇಗಳಡಿ 25ಕ್ಕೂ ಹೆಚ್ಚು ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿತ್ತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಕಟ್ಟಡದ ಅವಶೇಷಗಳಡಿ ಸಿಲುಕಿರುವವರಿಗಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.