ADVERTISEMENT

ಭಿವಂಡಿ ಕಟ್ಟಡ ಕುಸಿತ ಪ್ರಕರಣ; ಸತ್ತವರ ಸಂಖ್ಯೆ 33ಕ್ಕೆ ಏರಿಕೆ

ಪಿಟಿಐ
Published 23 ಸೆಪ್ಟೆಂಬರ್ 2020, 5:55 IST
Last Updated 23 ಸೆಪ್ಟೆಂಬರ್ 2020, 5:55 IST
ಮಹಾರಾಷ್ಟ್ರದ ಥಾಣೆ ಸಮೀಪದಲ್ಲಿರುವ ಭಿವಂಡಿ ಪಟ್ಟಣದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದಿದ್ದು, ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ಎನ್‌ಡಿಆರ್‌ಎಫ್ ಸಿಬ್ಬಂದಿ
ಮಹಾರಾಷ್ಟ್ರದ ಥಾಣೆ ಸಮೀಪದಲ್ಲಿರುವ ಭಿವಂಡಿ ಪಟ್ಟಣದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದಿದ್ದು, ರಕ್ಷಣಾ ಕಾರ್ಯದಲ್ಲಿ ನಿರತರಾಗಿರುವ ಎನ್‌ಡಿಆರ್‌ಎಫ್ ಸಿಬ್ಬಂದಿ   

ಥಾಣೆ: ಮಹಾರಾಷ್ಟ್ರದ ಭಿವಂಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೆ ಏರಿದ್ದು, ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ.

ಸತ್ತವರಲ್ಲಿ ಮೂವರು ಪುಟ್ಟ ಮಕ್ಕಳು ಸೇರಿದಂತೆ 15 ವರ್ಷ ವಯೋಮಾನದ ಹದಿನೈದು ಮಕ್ಕಳು ಸೇರಿದ್ದಾರೆ. ಸುರಿಯುವ ಮಳೆಯ ನಡುವೆಯೇ ಇಡೀ ರಾತ್ರಿ ರಕ್ಷಣಾಕಾರ್ಯ ಮುಂದುವರಿದಿದೆ.

ಇಲ್ಲಿವರೆಗೂ ಕಟ್ಟಡದ ಅವಶೇಷಗಳಡಿ 25 ಮಂದಿಯನ್ನು ರಕ್ಷಿಸಲಾಗಿದ್ದು ಅವರು, ಭಿವಂಡಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ದಿನಗಳಿಂದಕಟ್ಟಡದ ಅವಶೇಷಗಳ ಅಡಿ ಸಿಲುಕಿಕೊಂಡಿದ್ದ ಮೃತದೇಹಗಳು ಕೊಳೆಯುವ ಹಂತದಲ್ಲಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

43 ವರ್ಷದಷ್ಟು ಹಳೆಯದಾದ ಮೂರು ಅಂತಸ್ತಿನ ಜಿಲಾನಿ ಕಟ್ಟಡ ಸೋಮವಾರ ಮುಂಜಾನೆ 3.40ರ ಸುಮಾರಿಗೆ ಕುಸಿದುಬಿದ್ದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಕಟ್ಟಡದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಠಾಣೆಯಿಂದ 10 ಕಿ.ಮೀ ದೂರದಲ್ಲಿರುವ ಭಿವಿಂಡಿಯ ಈ ಕಟ್ಟಡದಲ್ಲಿ 40 ಫ್ಲ್ಯಾ ಟ್‌ಗಳಿದ್ದು, ಇದರಲ್ಲಿ 150 ಮಂದಿ ವಾಸಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.