ಶಿರಡಿ: ಕೋವಿಡ್ ಹಿನ್ನೆಲೆಯಲ್ಲಿ ಹಲವು ತಿಂಗಳುಗಳ ಕಾಲ ಮುಚ್ಚಲಾಗಿದ್ದ ಸಾಯಿಬಾಬಾ ದೇವಸ್ಥಾನವನ್ನು ಸೋಮವಾರ ಮತ್ತೆ ತೆರೆಯಲಾಗಿದ್ದು, ಭಕ್ತರು ಪ್ರಾರ್ಥನೆ ಸಲ್ಲಿಸಿದರು.
ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಪರಸ್ಪರ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್–19 ಸಂಬಂಧಿತ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ದೇವಸ್ಥಾನದಲ್ಲಿ ವಹಿಸಲಾಗಿದೆ.
ಮಹಾರಾಷ್ಟ್ರದಲ್ಲಿ ಇಂದಿನಿಂದ ಜಾರಿಗೆ ಬರುವಂತೆ ದೇವಸ್ಥಾನಗಳನ್ನು ಸಾರ್ವಜನಿಕರ ಭೇಟಿಗೆ ಮುಕ್ತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮಹಾರಾಷ್ಟ್ರವು ಭಾರತದ ಕೊರೊನಾ ಸೋಂಕಿನ ಕೇಂದ್ರಬಿಂದುವೆಂದೇ ಪರಿಗಣಿಸಲ್ಪಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.