ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರ ‘ಎಕ್ಸ್’ (ಟ್ವಿಟರ್) ಖಾತೆಯನ್ನು ಹ್ಯಾಕ್ ಮಾಡಿರುವ ಕಿಡಿಗೇಡಿಗಳು, ಪಾಕಿಸ್ತಾನ ಮತ್ತು ಟರ್ಕಿಯ ಧ್ವಜದ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಎಕ್ಸ್’ ಖಾತೆ ಹ್ಯಾಕ್ ಆಗಿರುವ ಬಗ್ಗೆ ನಾವು ತಕ್ಷಣ ಸೈಬರ್ ಅಪರಾಧ ಪೊಲೀಸರ ಗಮನಕ್ಕೆ ತಂದಿದ್ದೇವೆ. 30ರಿಂದ 45 ನಿಮಿಷಗಳ ಬಳಿಕ ಖಾತೆಯನ್ನು ಮರು ಸ್ಥಾಪಿಸಲಾಯಿತು ಎಂದು ಅವರು ಹೇಳಿದ್ದಾರೆ.
ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ವಿಭಾಗದ ಪಂದ್ಯದಲ್ಲಿ ಇಂದು (ಭಾನುವಾರ) ಭಾರತ ತಂಡವು ತನ್ನ ‘ಬದ್ಧ ಪ್ರತಿಸ್ಪರ್ಧಿ’ ಪಾಕಿಸ್ತಾನ ತಂಡವನ್ನು ಎದುರಿಸಲಿದೆ. ಈ ಟೂರ್ನಿಯಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವ ಎರಡನೇ ಪಂದ್ಯ ಇದಾಗಿದೆ. ಈ ಹಿನ್ನೆಲೆಯಲ್ಲಿ ಹ್ಯಾಕರ್‌ಗಳು ಎರಡು ಇಸ್ಲಾಮಿಕ್ ದೇಶಗಳ ಧ್ವಜದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.