ಎಫ್ಐಆರ್
(ಸಾಂದರ್ಭಿಕ ಚಿತ್ರ)
ನಾಗ್ಪುರ: 2024ರ ಸಾರ್ವತ್ರಿಕ ಚುನಾವಣೆಗೆ ಹೋಲಿಸಿದರೆ ಮಹಾರಾಷ್ಟ್ರದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಆರೋಪಿಸಿ, ಚುನಾವಣೆಗೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆ ನೀಡಿದ ಆರೋಪದ ಮೇಲೆ ಚುನಾವಣಾ ತಜ್ಞ ಸಂಜಯ್ ಕುಮಾರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
‘ಸುಮಾರು ಆರು ತಿಂಗಳ ಅಂತರದಲ್ಲಿ ನಡೆದ 2024ರ ಲೋಕಸಭೆ ಚುನಾವಣೆಗಳಿಗೆ ಹೋಲಿಸಿದರೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ ಎಂದು ಸಂಜಯ್ ಕುಮಾರ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು. ಬಳಿಕ ಆ ಪೋಸ್ಟ್ ಅನ್ನು ಅಳಿಸಿ ಹಾಕುವ ಮೂಲಕ ತಪ್ಪಾದ ಡೇಟಾವನ್ನು ಪೋಸ್ಟ್ ಮಾಡಿದ್ದಕ್ಕಾಗಿ ಕ್ಷಮೆಯಾಚಿಸಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.
ರಾಮ್‌ಟೆಕ್‌ನ ತಹಶೀಲ್ದಾರ್ ನೀಡಿದ ದೂರಿನ ಮೇರೆಗೆ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಂಜಯ್ ಕುಮಾರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 175 (ಚುನಾವಣೆಗೆ ಸಂಬಂಧಿಸಿದಂತೆ ಸುಳ್ಳು ಹೇಳಿಕೆ), 353 (1) ಬಿ (ಸಾರ್ವಜನಿಕ ದುಷ್ಕೃತ್ಯಕ್ಕೆ ಕಾರಣವಾಗುವ ಹೇಳಿಕೆ) ಸೇರಿದಂತೆ 212, 340ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.