ಮುಂಬೈ: ಮಹಾರಾಷ್ಟ್ರದ ಮತದಾರರ ಪಟ್ಟಿಗೆ 96 ಲಕ್ಷ ನಕಲಿ ಹೆಸರುಗಳನ್ನು ಸೇರಿಸಲಾಗಿದೆ ಎಂದು ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಭಾನುವಾರ ಆರೋಪಿಸಿದರು.
ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸದೆಯೇ ರಾಜ್ಯದಲ್ಲಿ ಸ್ಥಳೀಯ ಚುನಾವಣೆಗಳನ್ನು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಚುನಾವಣಾ ಆಯೋಗಕ್ಕೆ ಸವಾಲು ಹಾಕಿದರು.
ಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್‌ಎಸ್) ಬೂತ್ ಮಟ್ಟದ ಏಜೆಂಟ್‌ಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮತಗಳ್ಳತನದ ಮೂಲಕ ಚುನಾವಣೆ ನಡೆಸಿದಲ್ಲಿ ಅದು ದೇಶದ ಮತ್ತು ರಾಜ್ಯದ ಮತದಾರರಿಗೆ ಮಾಡುವ ಅತಿದೊಡ್ಡ ಅವಮಾನ ಎಂದರು.
ನಕಲಿ ಮತದಾರರನ್ನು ಪತ್ತೆ ಮಾಡಲು ಮತದಾರರ ಪಟ್ಟಿಯನ್ನು ಪರಿಶೀಲಿಸಿ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
‘ಪ್ರಾದೇಶಿಕ ಪಕ್ಷಗಳನ್ನು ‘ಮುಗಿಸಲು’ ಮತ ಅಕ್ರಮ ಎಸಗಲಾಗಿದೆ. ಮಹಾರಾಷ್ಟ್ರದ ಮುಂದಿನ ಚುನಾವಣೆಗಾಗಿ 96 ಲಕ್ಷ ನಕಲಿ ಮತದಾರರನ್ನು ಸೇರ್ಪಡೆ ಮಾಡಲಾಗಿದೆ’ ಎಂದು ಆರೋಪಿಸಿದರು.
ಮುಂಬೈ ನಗರವೊಂದರಲ್ಲಿಯೇ 8 ಲಕ್ಷದಿಂದ 10 ಲಕ್ಷ ನಕಲಿ ಮತದಾರರ ಹೆಸರನ್ನು ಸೇರ್ಪಡೆ ಮಾಡಲಾಗಿದೆ. ಠಾಣೆ, ಪುಣೆ ಮತ್ತು ನಾಸಿಕ್‌ನಲ್ಲಿ 8ರಿಂದ 8.50 ಲಕ್ಷ ಮತದಾರರನ್ನು ಸೇರಿಸಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.