ಮಹಾರಾಷ್ಟ್ರದ ರತ್ನಗಿರಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವುದು
ಕೃಪೆ: ಪಿಟಿಐ
ಮುಂಬೈ: ಭಾರಿ ಮಳೆಯಿಂದಾಗಿ ಬೆಳೆ ಹಾನಿಯಾಗಿರುವ 34 ಜಿಲ್ಲೆಗಳ ರೈತರ ಬೆನ್ನಿಗೆ ಮಹಾರಾಷ್ಟ್ರ ಸರ್ಕಾರ ನಿಂತಿದೆ. ಸಹಕಾರಿ ಬ್ಯಾಂಕ್‌ಗಳಲ್ಲಿನ ಸಾಲವನ್ನು ತರ್ಕಬದ್ಧಗೊಳಿಸುವುದು ಹಾಗೂ ಒಂದು ವರ್ಷದ ಮಟ್ಟಿಗೆ ಸಾಲ ವಸೂಲಾತಿಯನ್ನು ಅಮಾನತುಗೊಳಿಸುವುದಾಗಿ ಘೋಷಿಸಿದೆ.
ರಾಜ್ಯದ 347 ತಾಲ್ಲೂಕುಗಳಲ್ಲಿ ಬೆಳೆ, ಕೃಷಿ ಭೂಮಿ ಹಾಗೂ ಮನೆಗಳಿಗೆ ಭಾರಿ ಹಾನಿಯಾಗಿದೆ. ಸಾವು–ನೋವು ಸಂಭವಿಸಿದೆ ಎಂದು ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ.
ಸರ್ಕಾರದ ಮಾಹಿತಿ ಪ್ರಕಾರ, ಜೂನ್ – ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯದ 65 ಲಕ್ಷ ಹೆಕ್ಟೆರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಸೆಪ್ಟೆಂಬರ್‌ನಲ್ಲಿ ಸುರಿದ ಭಾರಿ ಮಳೆ, ಪ್ರವಾಹದಿಂದಾಗಿ ಮರಾಠವಾಡ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ಅಪಾರ ಪರಿಣಾಮಗಳುಂಟಾಗಿವೆ.
ಮಳೆ ಹಾಗೂ ಪ್ರವಾಹದಿಂದಾಗಿ ನಷ್ಟ ಅನುಭವಿಸಿದ ರೈತರಿಗೆ ಸರ್ಕಾರವು ಈ ವಾರದ ಆರಂಭದಲ್ಲಿ ₹ 31,628 ಕೋಟಿ ಪರಿಹಾರ ಘೋಷಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.