ADVERTISEMENT

ಮಹಾರಾಷ್ಟ್ರ: ಪಾಲ್ಘರ್‌ನ ಕೋವಿಡ್‌ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ, 13 ಸಾವು

ಪಿಟಿಐ
Published 23 ಏಪ್ರಿಲ್ 2021, 9:36 IST
Last Updated 23 ಏಪ್ರಿಲ್ 2021, 9:36 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ವಿರಾರ್‌ನಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ ಅಗ್ನಿ ಅನಾಹುತ ಸಂಭವಿಸಿದ್ದು, 13 ಮಂದಿ ಮೃತಪಟ್ಟಿದ್ದಾರೆ.

ನಸುಕಿನ 3 ಗಂಟೆ ವೇಳೆಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಸಿಯುನ ಎಸಿ ಘಟಕದಲ್ಲಿ ಸ್ಫೋಟ ಸಂಭವಿಸಿ ಬೆಂಕಿಹೊತ್ತಿಕೊಂಡಿತ್ತು ಎಂದು ಜಿಲ್ಲಾ ವಿಪತ್ತು ನಿಯಂತ್ರಣ ದಳದ ಮುಖ್ಯಸ್ಥ ವಿವೇಕಾನಂದ ಕದಂ ತಿಳಿಸಿದ್ದಾರೆ.

ADVERTISEMENT

ಆಸ್ಪತ್ರೆಯಲ್ಲಿ 16 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು ಎಂದೂ ಅವರು ಹೇಳಿದ್ದಾರೆ.

ವಸಾಯಿ ವಿರಾರ್‌ ಪಾಲಿಕೆಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇತರ ಸೋಂಕಿತರನ್ನು ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ನಾಸಿಕ್‌ನ ಡಾ. ಝಾಕಿರ್‌ ಹುಸೇನ್‌ ಸರ್ಕಾರಿ ಆಸ್ಪತ್ರೆಯ ಆಮ್ಲಜನಕ ಘಟಕದಲ್ಲಿ ಇತ್ತೀಚೆಗೆ ಸೋರಿಕೆ ಉಂಟಾಗಿ 24 ರೋಗಿಗಳು ಮೃತಪಟ್ಟಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.