ದೋಣಿ ಮಗುಚಿರುವ ದೃಶ್ಯ
Credit: iStock Photo
ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಅರಬ್ಬಿ ಸಮುದ್ರದಲ್ಲಿ ಎಂಟು ಮಂದಿ ಮೀನುಗಾರರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿ ಮೂವರು ಮೀನುಗಾರರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಾಂಡೇರಿಯಿಂದ ಬಂದ ದೋಣಿ ಅಲಿಬಾಗ್ ಬಳಿಯ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಭಾರಿ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ದೋಣಿ ಮಗುಚಿದೆ. ಕೂಡಲೇ ಎಚ್ಚೆತ್ತ ಮೀನುಗಾರರು ನೀರಿಗೆ ಹಾರಿದ್ದಾರೆ. ದೋಣಿಯಲ್ಲಿದ್ದ ಎಂಟು ಮೀನುಗಾರರ ಪೈಕಿ ಐವರು ಈಜಿಕೊಂಡು ದಡ ತಲುಪಿದ್ದಾರೆ.
ನಾಪತ್ತೆಯಾಗಿರುವ ಮೂವರು ಮೀನುಗಾರರನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಸ್ಥಳೀಯ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಡ್ರೋನ್‌ಗಳನ್ನು ಸಹ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದಡ ತಲುಪಿದ ಮೀನುಗಾರರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.