ADVERTISEMENT

ಸುಲಿಗೆ ಪ್ರಕರಣ: ‍ಪರಮ್‌ ಬೀರ್‌ ಸಿಂಗ್‌ ಅಮಾನತು ಮಾಡಿದ ಮಹಾರಾಷ್ಟ್ರ ಸರ್ಕಾರ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2021, 14:53 IST
Last Updated 2 ಡಿಸೆಂಬರ್ 2021, 14:53 IST
ಪರಮ್ ಬೀರ್ ಸಿಂಗ್ (ಸಂಗ್ರಹ ಚಿತ್ರ)
ಪರಮ್ ಬೀರ್ ಸಿಂಗ್ (ಸಂಗ್ರಹ ಚಿತ್ರ)   

ಮುಂಬೈ: ಸುಲಿಗೆ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ಮಹಾರಾಷ್ಟ್ರ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.

ನವೆಂಬರ್ 12 ರಂದು ಬೆನ್ನುಮೂಳೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮುಖ್ಯಮಂತ್ರಿ ಉದ್ದತ್ ಠಾಕ್ರೆ ಅವರು ಇಂದು ಆಸ್ಪತ್ರೆಯಿಂದ ಬಿಡುಗಡೆಯಾದರು. ಇದೇ ದಿನ ಅಮಾನತು ಆದೇಶವನ್ನು ಅನುಮೋದಿಸಿದ್ದಾರೆ.

ಮಹಾರಾಷ್ಟ್ರದ ಗೃಹ ರಕ್ಷಣಾ ದಳದ ಮುಖ್ಯಸ್ಥರಾಗಿ ನೇಮಕವಾದ ಬಳಿಕ ಪರಮ್‌ ಬೀರ್‌ ಸಿಂಗ್‌, ಕಳೆದ ಆರು ತಿಂಗಳಿನಿಂದ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಕರ್ತವ್ಯಕ್ಕೆ ಗೈರಾಗಿರುವುದನ್ನು ಪರಿಗಣಿಸಿ ಶಿಸ್ತು ಕ್ರಮಕ್ಕೂ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.