ADVERTISEMENT

ಮಹಾರಾಷ್ಟ್ರ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ಆಚಾರ್ಯ ದೇವವ್ರತ್

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 9:10 IST
Last Updated 15 ಸೆಪ್ಟೆಂಬರ್ 2025, 9:10 IST
<div class="paragraphs"><p>ಚಿತ್ರ ಕೃಪೆ;&nbsp;<a href="https://x.com/ADevvrat">@ADevvrat</a></p></div>

ಚಿತ್ರ ಕೃಪೆ; @ADevvrat

   

ಮುಂಬೈ: ಮಹಾರಾಷ್ಟ್ರದ ರಾಜ್ಯಪಾಲರಾಗಿ ಆಚಾರ್ಯ ದೇವವ್ರತ್ (66) ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಸಂಸ್ಕೃತದಲ್ಲಿ ‍ಪ್ರಮಾಣ ವಚನ ಸ್ವೀಕರಿಸಿದರು.

ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಅವರು ದೇವವ್ರತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮಹಾರಾಷ್ಟ್ರ ರಾಜಭವನದಲ್ಲಿ ನಡೆದ ಕಾರ್ಯಕ್ರಮಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಜರಿದ್ದರು.

ADVERTISEMENT

ಸಿ.ಪಿ. ರಾಧಾಕೃಷ್ಣನ್ ಉಪರಾಷ್ಟ್ರಪತಿಯಾಗಿ ಆಯ್ಕೆಯಾದ ಬಳಿಕ ಮಹಾರಾಷ್ಟ್ರದ ರಾಜ್ಯ ಪಾಲರಾಗಿ ಆಚಾರ್ಯ ದೇವವ್ರತ್ ಅವರನ್ನು ನೇಮಕ ಮಾಡಲಾಗಿತ್ತು.

2019 ರಿಂದ ಗುಜರಾತ್ ರಾಜ್ಯಪಾಲರಾಗಿದ್ದ ದೇವವ್ರತ್ , ಹಿಂದಿ ಮತ್ತು ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ಸಮಾರಂಭದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ರಾಜ್ಯ ಸಚಿವರು, ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.