ADVERTISEMENT

ಆಲಮಟ್ಟಿ ಅಣೆಕಟ್ಟೆ ಎತ್ತರ | ಸುಪ್ರಿಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ: 'ಮಹಾ' ಸಚಿವ

ಪಿಟಿಐ
Published 11 ಮಾರ್ಚ್ 2025, 13:11 IST
Last Updated 11 ಮಾರ್ಚ್ 2025, 13:11 IST
   

ಮುಂಬೈ: ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಕರ್ನಾಟಕದ ಪ್ರಸ್ತಾವವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರಿಂಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಲಿದೆ ಎಂದು ಜಲ ಸಂಪನ್ಮೂಲ ಸಚಿವ (ಮಹಾರಾಷ್ಟ್ರ) ರಾಧಾಕೃಷ್ಣ ವಿಖೆ ಪಾಟೀಲ್ ಮಂಗಳವಾರ ವಿಧಾನ ಪರಿಷತ್ತಿನಲ್ಲಿ ಹೇಳಿದ್ದಾರೆ.

ಕರ್ನಾಟಕ ಸರ್ಕಾರ ಆಲಮಟ್ಟಿ ಅಣೆಕಟ್ಟೆ ಎತ್ತರಿಸಲು ಪ್ರಸ್ತಾಪ ಮಾಡಿದೆ. ಇದಕ್ಕೆ ನಿಮ್ಮ ಆಕ್ಷೇಪಣೆ ಸಲ್ಲಿಸಿದ್ದೀರಾ? ಎಂದು ಎನ್‌ಸಿಪಿ ಸದಸ್ಯ ಅರುಣ್ ಲಾಡ್ ಕೇಳಿದ ಪ್ರಶ್ನೆಗೆ ಪಾಟೀಲ್ ಉತ್ತರಿಸಿದರು.

'ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಕರ್ನಾಟಕದ ಪ್ರಸ್ತಾವವನ್ನು ರಾಜ್ಯ ಸರ್ಕಾರ ನಿರಂತರವಾಗಿ ವಿರೋಧಿಸುತ್ತಲೇ ಬಂದಿದೆ. ಎತ್ತರ ಹೆಚ್ಚಳಕ್ಕೆ ಅನುಮತಿ ನೀಡುವ ಮೊದಲು ನಮ್ಮ ರಾಜ್ಯದ ಕಳವಳಗಳನ್ನು ಪರಿಗಣಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ನಾವು ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸುತ್ತೇವೆ' ಎಂದು ಹೇಳಿದ್ದಾರೆ.

ADVERTISEMENT

ಆಲಮಟ್ಟಿ ಜಲಾಶಯದ ಈಗಿನ ಎತ್ತರ 519.60 ಮೀಟರ್‌ ಇದ್ದು, 524.25 ಮೀಟರ್‌ಗೆ ಎತ್ತರಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಸಿದ್ದರಾಮಯ್ಯ ಅವರ ಸರ್ಕಾರ ಕೋರಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.