ADVERTISEMENT

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಸಿಕೆ ಖರೀದಿ: ಮಹಾರಾಷ್ಟ್ರ ಚಿಂತನೆ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 14:40 IST
Last Updated 22 ಏಪ್ರಿಲ್ 2021, 14:40 IST
ಲಸಿಕೆ
ಲಸಿಕೆ   

ಮುಂಬೈ: ರಾಜ್ಯದಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವುದು ಒಂದೆಡೆಯಾದರೆ, ಲಸಿಕೆ ಪೂರೈಕೆಯಲ್ಲಿಯೂ ಸುಧಾರಣೆ ಕಂಡುಬಂದಿಲ್ಲ. ಹೀಗಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋವಿಡ್‌–19 ಲಸಿಕೆ ಖರೀದಿಗಾಗಿ ಸಮಿತಿಯೊಂದನ್ನು ರಚಿಸಲು ಮಹಾರಾಷ್ಡ್ರ ಸರ್ಕಾರ ಚಿಂತನೆ ನಡೆಸಿದೆ.

18 ವರ್ಷ ಮೇಲ್ಪಟ್ಟವರಿಗೆ ಮೇ 1ರಿಂದ ಲಸಿಕೆ ನೀಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆಗ, ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಬೇಕಾಗುತ್ತದೆ. ಇದು ಕೂಡ ವಿದೇಶದಲ್ಲಿ ಲಸಿಕೆ ಖರೀದಿಸಲು ಮಹಾರಾಷ್ಟ್ರ ಚಿಂತನೆ ನಡೆಸಿರುವುದಕ್ಕೆ ಕಾರಣ ಎನ್ನಲಾಗುತ್ತಿದೆ.

‘ದೇಶದ ಕಂಪನಿಗಳಲ್ಲಿ ಅಥವಾ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಾಗಲಿ; ಲಭ್ಯವಿರುವ ಕಡೆಯಿಂದ ಲಸಿಕೆ ಖರೀದಿಸುವ ಸಲುವಾಗಿ ಸಮಿತಿ ರಚಿಸಲು ಸಚಿವ ಸಂಪುಟದಲ್ಲಿ ಚರ್ಚಿಸಿದ್ದೇವೆ. ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ’ ಎಂದು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ನವಾಬ್‌ ಮಲಿಕ್‌ ಹೇಳಿದರು.

ADVERTISEMENT

‘ಮೇ 24ರ ವರೆಗೆ ನೇರವಾಗಿ ರಾಜ್ಯಕ್ಕೆ ಲಸಿಕೆ ಪೂರೈಕೆ ಸಾಧ್ಯವಿಲ್ಲ ಎಂಬುದಾಗಿ ಸೀರಂ ಇನ್ಸ್‌ಟಿಟ್ಯೂಟ್‌ ಆಫ್‌ ಇಂಡಿಯಾ ತಿಳಿಸಿದೆ’ ಎಂದು ಆರೋಗ್ಯ ಸಚಿವ ರಾಜೇಶ್‌ ಟೋಪೆ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.