ಮುಂಬೈ: ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವುದರಿಂದ ವಾಹನ ಚಾಲಕರಿಗೆ ಮಾದಕ ದ್ರವ್ಯ ಸೇವನೆಯ ತಪಾಸಣೆಗಾಗಿ ಸಂಚಾರ ಪೊಲೀಸರಿಗೆ ಕಿಟ್‌ಗಳನ್ನು ಪೂರೈಸಲಾಗುವುದು ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್‌ನಾಯಿಕ್ ಹೇಳಿದ್ದಾರೆ.
ರಸ್ತೆ ಅಪಘಾತಗಳು ಹೆಚ್ಚುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ನಡೆದ ಚರ್ಚೆಯಲ್ಲಿ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಮಹಾರಾಷ್ಟ್ರದಲ್ಲಿ ಪ್ರತಿದಿನಕ್ಕೆ ಸರಾಸರಿ 98 ರಂತೆ 2024 ರಲ್ಲಿ 36,084 ರಸ್ತೆ ಅಪಘಾತಗಳು ಸಂಭವಿಸಿವೆ. 15,282 ಜನ ಮೃತರಾಗಿದ್ದಾರೆ. ಪ್ರತಿದಿನ 40 ಜನ ಸಾಯುತ್ತಿದ್ದಾರೆ. ಇದು ದೇಶದಲ್ಲಿಯೇ ಹೆಚ್ಚು ಎಂದು ವಿವರಿಸಿದ್ದಾರೆ.
ಅಪಘಾತಗಳ ತಡೆಗೆ ಈಗಿರುವ ತಂತ್ರಜ್ಞಾನಗಳ ಜೊತೆ, ಎಐ ಬಳಕೆ, ಅತ್ಯಾಧುನಿಕ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆಯನ್ನು ಹೆಚ್ಚಿಸಲಾಗುವುದು. ಕೇರಳ ಮಾದರಿಯಲ್ಲಿ ಡ್ರಗ್ಸ್ ತಪಾಸಣೆ ಕಿಟ್‌ಗಳನ್ನು ನೀಡಲಾಗುತ್ತದೆ. ಈ ಕಿಟ್‌ಗಳಿಂದ ಕ್ಷಣಾರ್ಧದಲ್ಲಿ ಫಲಿತಾಂಶ ಸಿಗಲಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತಗಳನ್ನು ಗಣನೀಯವಾಗಿ ತಗ್ಗಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.