ನವದೆಹಲಿ: ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ತಯಾರು ಮಾಡುವುದಕ್ಕಾಗಿ ಬಿಜೆಪಿ ಸಭೆ ಸೇರಿದೆ.
ನವದೆಹಲಿಯಬಿಜೆಪಿ ಪ್ರಧಾನ ಕಚೇರಿಯಲ್ಲಿ ಭಾನುವಾರ ಕೇಂದ್ರ ಸಚಿವ, ಬಿಜೆಪಿ ಅಧ್ಯಕ್ಷಅಮಿತ್ ಶಾ ನೇತೃತ್ವದಲ್ಲಿ ಈ ಸಭೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿಮತ್ತು ಪಕ್ಷದ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಅವರು ಮಹಾರಾಷ್ಟ್ರ ಮತ್ತು ಹರ್ಯಾಣದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.
ಮಹಾರಾಷ್ಟ್ರದಲ್ಲಿ ಶಿವಸೇನೆಗಿಂತ ಹೆಚ್ಚಿನ ಸೀಟುಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆಯೇ ಎಂಬುದರ ಬಗ್ಗೆ ಈ ಸಭೆಯಲ್ಲಿ ತೀರ್ಮಾನವಾಗಲಿದೆ.
ಎರಡೂ ರಾಜ್ಯಗಳಲ್ಲಿ ನಾಮಪತ್ರ ಸಲ್ಲಿಸಲಿರುವ ಅಂತಿಮ ದಿನಾಂಕ ಅಕ್ಟೋಬರ್ 4 ಆಗಿದೆ.ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.
ಈ ಬಾರಿ ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡಣವಿಸ್ ಅವರನ್ನೇ ಮತ್ತೊಮ್ಮೆ ಮುಖ್ಯಮಂತ್ರಿಯನ್ನಾಗಿ ಮಾಡಲು ಬಿಜೆಪಿ ಒಲವು ತೋರಿದೆ. ಏತನ್ಮಧ್ಯೆ, ಶಿವ ಸೈನಿಕನನ್ನೇ ಮಹಾರಾಷ್ಟ್ರದ ಮುಖ್ಯಮಂತ್ರಿಯನ್ನಾಗಿ ಮಾಡುವೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.