ಮುಂಬೈ: ಮಹಾರಾಷ್ಟ್ರದಲ್ಲಿ 84 ಹೊಸ ಕೋವಿಡ್ - 19 ಪ್ರಕರಣಗಳು ದಾಖಲಾಗಿದೆ. ಇದರೊಂದಿಗೆ ಈ ವರ್ಷದಲ್ಲಿ ಒಟ್ಟು 681 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆಯು ಮಾಹಿತಿ ನೀಡಿದೆ.
ಬಹುಪಾಲು ಪ್ರಕರಣಗಳು ಸಾಮಾನ್ಯ ಗುಣಲಕ್ಷಣಗಳಿಂದ ಕೂಡಿದ್ದು, ಸಾರ್ವಜನಿಕರು ಭಯ ಪಡಬೇಕಾದ ಅಗತ್ಯವಿಲ್ಲ ಎಂದು ತಿಳಿಸಿದೆ.
ರಾಜ್ಯದ ರಾಜಧಾನಿ ಮುಂಬೈನಲ್ಲಿ 32 ಹೊಸ ಪ್ರಕರಣ, ಥಾಣೆಯಲ್ಲಿ 2 ಪ್ರಕರಣಗಳು, ಥಾಣೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 14 ಪ್ರಕರಣಗಳು, ಪುಣೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 19 ಪ್ರಕರಣಗಳು ಮತ್ತು ನವಿ ಮುಂಬೈ, ಕಲ್ಯಾಣ್ ನಗರ, ರಾಯಗಢ, ನಾಸಿಕ್, ಕೊಲ್ಲಾಪುರ, ಸಾಂಗ್ಲಿಯಲ್ಲಿ ತಲಾ ಒಂದು ಪ್ರಕರಣಗಳು ದಾಖಲಾಗಿದೆ ಎಂದು ಮಾಹಿತಿ ನೀಡಿದೆ.
ರಾಜ್ಯದಲ್ಲಿ ಒಟ್ಟು 467 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.