ಮುಂಬೈ: ಮಹಾರಾಷ್ಟ್ರದಲ್ಲಿ ಸುರಿದ ಅಕಾಲಿಕ ಮಳೆಯಿಂದ ಉಂಟಾದ ವಿವಿಧ ಅವಘಡಗಳಲ್ಲಿ 8 ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಹಲವು ಮನೆಗಳು ಹಾನಿಗೊಂಡಿದ್ದು, ಬೆಳೆಗಳು ಕೊಚ್ಚಿ ಹೋಗಿವೆ. ಅಪಾರ ಪ್ರಮಾಣದ ಕೃಷಿಭೂಮಿ ನಾಶವಾಗಿದೆ.
ಕಳೆದ ಎರಡು ದಿನಗಳಲ್ಲಿ 5,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಈ ಮೊದಲೇ ಕೃಷಿ ಭೂಮಿ ಹಾನಿಗೊಳಗಾಗಿದ್ದ ಮರಾಠವಾಡ ಪ್ರದೇಶವು ಮಳೆಯಿಂದ ಇನ್ನಷ್ಟು ಸಂಕಷ್ಟಕ್ಕೀಡಾಗಿದೆ.
ಭಾರಿ ಮಳೆಯಿಂದಾಗಿ ಹಲವಯ ಅಣೆಕಟ್ಟೆಗಳಲ್ಲಿ ನೀರಿನ ಮಟ್ಟವು ಭರ್ತಿ ಹಂತಕ್ಕೆ ತಲುಪಿದೆ.
ಹಾನಿಗೊಳಗಾಗಿರುವ ಪ್ರತಿ ಹೆಕ್ಟೇರ್ ಕೃಷಿ ಭೂಮಿಗೆ ₹50,000 ಪರಿಹಾರ ಘೋಷಿಸುವಂತೆ ವಿಪಕ್ಷ ಮಹಾ ವಿಕಾಸ ಅಘಾಡಿ ಕೇಳಿದೆ.
ಸ್ಥಳದಲ್ಲಿರುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಶಿಬಿರಗಳಲ್ಲಿರುವ ಜನರಿಗೆ ಆಹಾರ ಮತ್ತು ನೀರಿನ ಪೂರೈಕೆ ವ್ಯವಸ್ಥೆ ಮಾಡುತ್ತಿದ್ದೇವೆ. ರೇಷನ್ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ಮೇವಿನ ಕೊರತೆ ಉಂಟಾಗಿರುವ ಹಲವು ಜಿಲ್ಲೆಗಳಿಗೆ ಮೇವಿನ ಪೂರೈಕೆ ಮಾಡುವಂತೆಯೂ ಆದೇಶಿಸಲಾಗಿದೆ–ದೇವೇಂದ್ರ ಫಡಣವೀಸ್, ಮಹಾರಾಷ್ಟ್ರ ಮುಖ್ಯಮಂತ್ರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.