ADVERTISEMENT

Election Results | ಮಹಾರಾಷ್ಟ್ರದಲ್ಲಿ ಮಹಾಯುತಿ– ಜಾರ್ಖಂಡ್‌ನಲ್ಲಿ ಇಂಡಿಯಾ ಬಣಕ್ಕೆ ಜನಾದೇಶ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2024, 13:31 IST
Last Updated 23 ನವೆಂಬರ್ 2024, 13:31 IST
   

ಮಹಾರಾಷ್ಟ್ರ, ಜಾರ್ಖಂಡ್‌ನಲ್ಲಿ ಸರ್ಕಾರ ರಚನೆಗೆ ಸಿದ್ಧತೆ

ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕಿಯೆ ಅಂತಿಮ ಘಟಕ್ಕೆ ತಲುಪಿದೆ. ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ ಹಾಗೂ ಜಾರ್ಖಂಡ್‌ನಲಲ್ಲಿ ಜೆಎಂಎಂ ನೇತೃತ್ವದ ಇಂಡಿಯಾ ಒಕ್ಕೂಟ ಗೆಲುವು ಸಾಧಿಸಿವೆ.

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ 230 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸುವ ಹೊಸ್ತಿಲಲ್ಲಿದೆ. ಮಹಾ ವಿಕಾಸ ಅಘಾಡಿಯು 51 ಹಾಗೂ ಪಕ್ಷೇತರರು 7 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಹಾಗೆಯೇ ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಇಂಡಿಯಾ ಒಕ್ಕೂಟ 56 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಎನ್‌ಡಿಎ 24 ಹಾಗೂ ಇತರೆ ಪಕ್ಷ 1 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಉಭಯ ರಾಜ್ಯಗಳಲ್ಲಿ ಸರ್ಕಾರ ರಚನೆಯ ಕಸರತ್ತು ನಡೆಯುತ್ತಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಇತ್ತೀಚೆಗೆ ನಡೆದಿದ್ದು, ಮತ ಎಣಿಕೆಗೆ ಸಿದ್ಧತೆ ಆರಂಭಗೊಂಡಿದೆ. ಗೆಲುವು ಯಾವ ಬಣದ್ದಾಗಲಿದೆ ಹಾಗೂ ಅಧಿಕಾರದ ಚುಕ್ಕಾಣಿ ಯಾರು ಹಿಡಿಯಲಿದ್ದಾರೆ ಎಂಬುದಕ್ಕೆ ಇಂದು ತೆರೆ ಬೀಳಲಿದೆ.

ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ಹಾಗೂ ಜಾರ್ಖಂಡ್‌ನ 81 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಮತ ಎಣಿಕೆ ಆರಂಭಗೊಂಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನಾ ಹಾಗೂ ಎನ್‌ಸಿಪಿ ನೇತೃತ್ವದ ಮಹಾಯುತಿ ಬಣ ಹಾಗೂ ಕಾಂಗ್ರೆಸ್‌, ಶಿವಸೇನಾ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ಪಕ್ಷಗಳ ಮಹಾ ವಿಕಾಸ ಅಘಾಡಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಮತ್ತೊಂದೆಡೆ ಜಾರ್ಖಂಡ್‌ನಲ್ಲಿ ಕಾಂಗ್ರೆಸ್‌ ಹಾಗೂ ಜೆಎಂಎಂ ಮೈತ್ರಿ ವಿರುದ್ಧ ಬಿಜೆಪಿ ನೇತೃತ್ವದ ಎನ್‌ಡಿಎ ನಡುವೆ ನೇರ ಸ್ಪರ್ಧೆ ನಡೆದಿದೆ. ಮತ ಎಣಿಕೆ ಕೇಂದ್ರದಲ್ಲಿ ಅಂತಿಮ ಸಿದ್ಧತೆಗಳನ್ನು ಅಧಿಕಾರಿಗಳು ಪೂರೈಸಿದ್ದು, ಕೆಲವೇ ಕ್ಷಣಗಳಲ್ಲಿ ಮತದಾನ ಆರಂಭವಾಗಲಿದೆ.

ಮತ ಎಣಿಕೆ ಕೇಂದ್ರದ 2 ಕಿ.ಮೀ. ಸುತ್ತಳತೆಯಲ್ಲಿ ಅಂತರ್ಜಾಲ ಸೇವೆಯನ್ನು ನಿಷೇಧಿಸುವಂತೆ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷವು ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. ಬಿಜೆಪಿಯು ವಿವಿಧ ರಾಜ್ಯಗಳಿಂದ ತಂತ್ರಜ್ಞರನ್ನು ಕರೆಯಿಸಿ ಮತ ಎಣಿಕೆ ಕೇಂದ್ರದ ಬಳಿ ನಿಯೋಜಿಸಿದೆ ಎಂಬ ಸಂಗತಿ ನಂಬಲರ್ಹ ಮೂಲಗಳಿಂದ ಗೊತ್ತಾಗಿದೆ. ಚುನಾವಣಾ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯಬೇಕೆಂದರೆ ಮತ ಎಣಿಕೆ ಕೇಂದ್ರದ ಸುತ್ತ ಅಂತರ್ಜಾಲವನ್ನು ನಿಷೇಧಿಸಬೇಕು ಎಂದು ಪಕ್ಷ ಆಗ್ರಹಿಸಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಆರಂಭಿಕ ಮುನ್ನಡೆ ದೊರೆತಿದ್ದು, ಆರು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮತ್ತೊಂದೆಡೆ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ ಅಘಾಡಿಯು ಮೂರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಮಹಾಯುತಿಗೆ 34 ಕ್ಷೇತ್ರಗಳಲ್ಲಿ ಹಾಗೂ ಮಹಾ ವಿಕಾಸ ಅಘಾಡಿಗೆ 6 ಕ್ಷೇತ್ರಗಳಲ್ಲಿ ಮುನ್ನಡೆ

ಜಾರ್ಖಂಡ್‌ನಲ್ಲಿ ಎನ್‌ಡಿಎ 17ರಲ್ಲಿ ಹಾಗೂ ‘ಇಂಡಿಯಾ’ ಬಣಕ್ಕೆ 6 ಕ್ಷೇತ್ರಗಳಲ್ಲಿ ಮುನ್ನಡೆ

ಮಹಾರಾಷ್ಟ್ರದಲ್ಲಿ ಏಕನಾಥ ಶಿಂದೆ, ಆದಿತ್ಯ ಠಾಕ್ರೆ, ದೇವೇಂದ್ರ ಫಡಣವೀಸ್‌ಗೆ ಮುನ್ನಡೆಯಾದರೆ, ಎನ್‌ಸಿಪಿಯ ಅಜಿತ್‌ ಪವಾರ್‌ ಹಿನ್ನಡೆ ಅನುಭವಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟವು 114 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಮಹಾ ವಿಕಾಸ ಅಘಾಡಿಯು 83 ಕ್ಷೇತ್ರಗಳಲ್ಲಿ ಮುಂದಿದೆ. ಖಾರ್ಜಂಡ್‌ನಲ್ಲಿ ಎನ್‌ಡಿಎ 35 ಕ್ಷೇತ್ರಗಳಲ್ಲಿ ಹಾಗೂ ಇಂಡಿಯಾ ಬಣ 31 ಕ್ಷೇತ್ರಗಳಲ್ಲಿ ಮುಂದಿದೆ.

ಇತ್ತೀಚೆಗೆ ಹಂತಕರ ಗುಂಡಿಗೆ ಬಲಿಯಾದ ಬಾಬಾ ಸಿದ್ಧಿಕಿ ಪುತ್ರ ಜಿಶಾನ್ ಸಿದ್ಧಿಕಿ ಅವರು ಬಾಂದ್ರಾ ಪೂರ್ವದಲ್ಲಿ ಮುನ್ನಡೆ ಸಾಧಿಸಿದ್ದಾರೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು, ಬಿಜೆಪಿ ನೇತೃತ್ವದ ಮಹಾಯುತಿಯು ಅಧಿಕಾರ ಹಿಡಿಯಲು ಅಗತ್ಯವಿರುವ ಮ್ಯಾಜಿಕ್‌ ಸಂಖ್ಯೆಯನ್ನು ದಾಟಿದೆ. 288 ಸದಸ್ಯಬಲದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಅಧಿಕಾರಕ್ಕೆ 145 ಶಾಸಕರ ಅಗತ್ಯವಿದೆ. ಮಹಾಯುತಿಯು 157 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಮಹಾ ವಿಕಾಸ ಅಘಾಡಿ 98 ಕ್ಷೇತ್ರಗಳಲ್ಲಿ ಹಾಗೂ ಇತರೆ ಅಭ್ಯರ್ಥಿಗಳು 5 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

81 ಕ್ಷೇತ್ರಗಳ ಜಾರ್ಖಂಡ್ ವಿಧಾನಸಭೆಯಲ್ಲಿ ಅಧಿಕಾರ ಹಿಡಿಯಲು ಅಗತ್ಯವಿರುವ 41 ಕ್ಷೇತ್ರಗಳ ಗಡಿಯನ್ನು ಬಿಜೆಪಿ ನೇತೃತ್ವದ ಎನ್‌ಡಿಎ ದಾಟಿದೆ. ‘ಇಂಡಿಯಾ‘ ಬಣ 38 ಕ್ಷೇತ್ರಗಳಲ್ಲಿ ಮುಂದಿದೆ. ಮಹಾರಾಷ್ಟ್ರದಲ್ಲಿ ಮಹಾಯುತಿಯು 205 ಕ್ಷೇತ್ರಗಳಲ್ಲಿ ಮುಂದಿದ್ದು, ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಎಂವಿಎ 68 ಕ್ಷೇತ್ರಗಳಿಗೆ ಕುಸಿದಿದೆ.

ಮಹಾರಾಷ್ಟ್ರ ವಿಧಾನಸಭೆಯ ಚುನಾವಣಾ ಪೂರ್ವ ಸಮೀಕ್ಷಾ ವರದಿ

ಜಾರ್ಖಂಡ್ ವಿಧಾನಸಭೆಯ ಚುನಾವಣಾ ಪೂರ್ವ ಸಮೀಕ್ಷಾ ವರದಿ

ಜಾರ್ಖಂಡ್‌ನ 81 ಕ್ಷೇತ್ರಗಳ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಇತ್ತೀಚಿನ ವರದಿಗಳ ಪ್ರಕಾರ ಕಾಂಗ್ರೆಸ್ ಹಾಗೂ ಜೆಎಂಎಂ ಮೈತ್ರಿಕೂಟದ ಇಂಡಿಯಾ ಬಣ 55 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ಮೊದಲು ರಾಜ್ಯದಲ್ಲಿ ಎನ್‌ಡಿಎ ಬಣ ಮುಂದಿತ್ತು. ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಯು 211 ಕ್ಷೇತ್ರಗಳಲ್ಲಿ ಮುಂದಿದೆ. ಮಹಾ ವಿಕಾಸ ಅಘಾಡಿ 60 ಕ್ಷೇತ್ರಗಳಲ್ಲಿ ಮುಂದಿದೆ.

ಮಹಾರಾಷ್ಟ್ರದಲ್ಲಿ 227 ಕ್ಷೇತ್ರಗಳಲ್ಲಿ ಮಹಾಯುತಿ ಮುನ್ನಡೆ ಕಾಯ್ದುಕೊಂಡಿದೆ. ಮಹಾ ವಿಕಾಸ ಅಘಾಡಿಯ ಪ್ರಮುಖರ ಹಿನ್ನಡೆ ಅನುಭವಿಸಿದ್ದಾರೆ. ಜಾರ್ಖಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟ 57 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಬಾಳಾಸಾಹೇಬ್ ಠಾಕ್ರೆ ಮತ್ತು ಆನಂದ್ ದಿಘೆ ಅವರ ಸಿದ್ಧಾಂತವನ್ನು ನಿಜವಾಗಿಯೂ ಯಾರು ಅನುಸರಿಸುತ್ತಾರೆ ಎಂಬುದನ್ನು ಮತದಾರರು ತೋರಿಸಿದ್ದಾರೆ.ಇದು ಜನರ ಗೆಲುವು– ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ

ನಾನು ಆಧುನಿಕ ಅಭಿಮನ್ಯು: ಫಡಣವೀಸ್

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟವು ಭಾರೀ ಮುನ್ನಡೆ ಕಾಯ್ದುಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ದೇವೇಂದ್ರ ಫಡಣವೀಸ್, ನಾನು ಆಧುನಿಕ ಅಭಿಮನ್ಯು. ಚಕ್ರವ್ಯೂಹವನ್ನು ಭೇದಿಸಿದ್ದೇನೆ ಎಂದು ಹೇಳಿದ್ದಾರೆ.

ಮಹಾಯುತಿಯಲ್ಲಿ ಸಂಭ್ರಮ ಮನೆ ಮಾಡಿದೆ. ಬಿಜೆಪಿ, ಎನ್‌ಸಿಪಿ ಹಾಗೂ ಶಿವಸೇನಾ ನೇತೃತ್ವದ ಮಹಾಯುತಿಯು ಭಾರೀ ಬಹುತಮದೊಂದಿಗೆ ಸರ್ಕಾರ ರಚನೆಯ ಹೊಸ್ತಿಲಲ್ಲಿದೆ. ಜಾರ್ಖಂಡ್‌ನಲ್ಲಿ ಇಂಡಿಯಾ ಬಣ ಮುನ್ನಡೆ ಕಾಯ್ದುಕೊಂಡಿದೆ.

ಜಾರ್ಖಂಡ್‌ನಲ್ಲಿ ಆರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಆರ್‌ಜೆಡಿ ಪಕ್ಷವು ಐದರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟವು ಭಾರೀ ಮುನ್ನಡೆ ಕಾಯ್ದುಕೊಂಡಿದ್ದು 230 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸುವ ಹೊಸ್ತಿಲಲ್ಲಿದೆ. ಮಹಾ ವಿಕಾಸ ಅಘಾಡಿಯು 51 ಕ್ಷೇತ್ರಗಳಲ್ಲಷ್ಟೇ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಶಕ್ತವಾಗಿದೆ. ಇತರೆ ಪಕ್ಷ ಹಾಗೂ ಪಕ್ಷೇತರರು 07 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 

ಜಾರ್ಖಂಡ್‌ನಲ್ಲಿ ಜೆಎಂಎಂ ಮೈತ್ರಿಕೂಟ ಮುನ್ನಡೆ

ಜಾರ್ಖಂಡ್ ವಿಧಾನಸಭಾ ಚುನಾವಣೆ 2024ರ ಮತ ಎಣಿಕೆ ಅಂತಿಮ ಘಟ್ಟದಲ್ಲಿದ್ದು, ಜೆಎಂಎಂ ನೇತೃತ್ವದ ಇಂಡಿಯಾ ಒಕ್ಕೂಟ 56 ಸೀಟುಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಸಿಎಂ ಹೇಮಂತ್‌ ಸೊರೇನ್‌ ಬರ್ಹೈತ್ ವಿಧಾನಸಭಾ ಕ್ಷೇತ್ರದಿಂದ ಮುನ್ನಡೆ ಸಾಧಿಸಿದ್ದಾರೆ.

ಹೇಮಂತ್ ಸೊರೇನ್‌ ಜಾರ್ಖಂಡ್ ಸಿಎಂ ಆಗಿ ಮುಂದುವರಿಯುತ್ತಾರೆ
– ಗುಲಾಮ್ ಅಹ್ಮದ್ ಮಿರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ
  • ಸರಿಕೆಲ್ಲಾ ಕ್ಷೇತ್ರದಲ್ಲಿ ಬಿಜೆಪಿಯ ಚಂಪೈ ಸೊರೇನ್ 39,105 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ನನ್ನ ಮೇಲೆ ಪ್ರೀತಿ ತೋರಿಸಿ, ನಿಮ್ಮ ಮಗಳಂತೆ ಆಶೀರ್ವದಿಸಿದ ರಾಜ್ಯದ ಜನತೆಗೆ ಧನ್ಯವಾದ
– ಕಲ್ಪನಾ ಸೊರೇನ್
ಜಾರ್ಖಂಡ್‌ನಲ್ಲಿ ಸೋಲು ನನಗೆ ಅತೀವ ನೋವು ತಂದಿದೆ:
ಹಿಮಂತ ಬಿಸ್ವಾ ಶರ್ಮಾ, ಬಿಜೆಪಿ ಚುನಾವಣಾ ಸಹ ಉಸ್ತುವಾರಿ