ADVERTISEMENT

ಮಹಾರಾಷ್ಟ್ರ ಸರ್ಕಾರದಿಂದಲೇ ಭೂಗಳ್ಳತನ: ರಾಹುಲ್‌ ಗಾಂಧಿ

ಪಿಟಿಐ
Published 7 ನವೆಂಬರ್ 2025, 13:42 IST
Last Updated 7 ನವೆಂಬರ್ 2025, 13:42 IST
ರಾಹುಲ್‌ ಗಾಂಧಿ
ರಾಹುಲ್‌ ಗಾಂಧಿ   

ನವದೆಹಲಿ: ಮಹಾರಾಷ್ಟ್ರದಲ್ಲಿ ದಲಿತರಿಗಾಗಿ ಮೀಸಲಿಟ್ಟಿದ್ದ ₹1,800 ಕೋಟಿ ಮೌಲ್ಯದ ಸರ್ಕಾರಿ ಜಮೀನನ್ನು ರಾಜ್ಯದ ಸಚಿವರ ಪುತ್ರನಿಗೆ ಮಾರಾಟ ಮಾಡಲಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪ ಮಾಡಿದರು.

ಮತ ಅಕ್ರಮದ ಮೂಲಕ ಅಧಿಕಾರಕ್ಕೆ ಬಂದಿರುವ ಸರ್ಕಾರವೇ ಈ ‘ಭೂಗಳ್ಳತನ’ ಮಾಡಿದೆ ಎಂದು ಅವರು ಶುಕ್ರವಾರ ‘ಎಕ್ಸ್‌’ನಲ್ಲಿ ದೂರಿದರು.

₹1,800 ಕೋಟಿ ಬೆಲೆಬಾಳುವ ಭೂಮಿಯನ್ನು ಸಚಿವರ ಪುತ್ರನ ಕಂಪನಿಗೆ ಕೇವಲ ₹300 ಕೋಟಿಗೆ ಮಾರಾಟ ಮಾಡಲಾಗಿದೆ ಎಂದು ಆರೋಪಿಸಿದರು.

ADVERTISEMENT

‘ಪ್ರಧಾನಿ ನರೇಂದ್ರ ಮೋದಿ ಅವರೇ... ನಿಮ್ಮ ಮೌನವೇ ಎಲ್ಲವನ್ನೂ ಹೇಳುತ್ತದೆ. ದಲಿತರು ಮತ್ತು ದುರ್ಬಲರ ಹಕ್ಕುಗಳನ್ನು ಕಸಿದುಕೊಂಡು ಬದುಕುವ ಲೂಟಿಕೋರರಿಂದ ನಿಮ್ಮ ಸರ್ಕಾರ ನಡೆಯುತ್ತಿರುವ ಕಾರಣದಿಂದ ನೀವು ಮೌನವಾಗಿದ್ದೀರಾ’ ಎಂದು ಪ್ರಶ್ನಿಸಿದ್ದಾರೆ. 

₹300 ಕೋಟಿ ಮೌಲ್ಯದ ಭೂವ್ಯವಹಾರವು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ಪುತ್ರ ಪಾರ್ಥ ಅವರ ಮಾಲೀಕತ್ವದ ಸಂಸ್ಥೆಗೆ ಸಂಬಂಧಿಸಿದ್ದಾಗಿದೆ. ಇದು ಮಹಾರಾಷ್ಟ್ರ ರಾಜ್ಯ ರಾಜಕೀಯದಲ್ಲಿ ಚರ್ಚಿತವಾಗುತ್ತಿದ್ದು, ಸರ್ಕಾರವು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.