ಮುಂಬೈ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೊದಲ ಹಂತದಲ್ಲಿ 264 ಪುರಸಭೆಗಳು ಮತ್ತು ನಗರ ಪಂಚಾಯ್ತಿಗಳಿಗೆ ಮಂಗಳವಾರ ಮತದಾನ ನಡೆಯುತ್ತಿದ್ದು, 6,042 ಸ್ಥಾನಗಳು ಮತ್ತು 264 ಪರಿಷತ್ ಅಧ್ಯಕ್ಷರ ಹುದ್ದೆಗಳಿಗೆ ಚುನಾವಣೆ ನಡೆಯುತ್ತಿದೆ.
ಮತದಾನ ಬೆಳಿಗ್ಗೆ 7.30ಕ್ಕೆ ಪ್ರಾರಂಭವಾಗಿ ಸಂಜೆ 5.30ಕ್ಕೆ ಕೊನೆಗೊಳ್ಳಲಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಹು ಹಂತದ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೊದಲ ಸುತ್ತಿನಲ್ಲಿ ಸುಮಾರು ಒಂದು ಕೋಟಿ ಮತದಾರರು ತಮ್ಮ ಮತ ಚಲಾಯಿಸಲು ಅರ್ಹರಾಗಿದ್ದಾರೆ.
ಪುರಸಭೆ ಅಧ್ಯಕ್ಷರ 264 ಹುದ್ದೆಗಳು ಮತ್ತು ಪಟಗಟಣ ಪಂಚಾಯ್ತಿ ಹಾಗೂ ನಗರ ಪಂಚಾಯ್ತಿಗಳಲ್ಲಿ 6,042 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.
ಅಧಿಕಾರಿಗಳ ಪ್ರಕಾರ, 12,316 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ರಾಜ್ಯದಾದ್ಯಂತ 62,108 ಚುನಾವಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಶಾಂತಿಯುತ ಮತದಾನವನ್ನು ಖಚಿತಪಡಿಸಿಕೊಳ್ಳಲು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.
ರಾಜ್ಯ ಚುನಾವಣಾ ಆಯೋಗವು ಸಾಕಷ್ಟು ಸಂಖ್ಯೆಯ ವಿದ್ಯುನ್ಮಾನ ಮತ ಯಂತ್ರಗಳು, 17,367 ನಿಯಂತ್ರಣ ಘಟಕಗಳು ಮತ್ತು 34,734 ಮತಪತ್ರ ಘಟಕಗಳನ್ನು ವ್ಯವಸ್ಥೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನವೆಂಬರ್ 4ರಂದು 288 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಿಗದಿಪಡಿಸಲಾಗಿತ್ತು. ಚುನಾವಣಾ ಅಧಿಕಾರಿಗಳ ನಿರ್ಧಾರಗಳ ವಿರುದ್ಧ ಸಲ್ಲಿಸಲಾದ ನ್ಯಾಯಾಂಗ ಮೇಲ್ಮನವಿಗಳನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗವು 24 ಸ್ಥಳೀಯ ಸಂಸ್ಥೆಗಳ ಮತದಾನವನ್ನು ಡಿಸೆಂಬರ್ 20ಕ್ಕೆ ಮುಂದೂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.