ADVERTISEMENT

ಅಮ್ಮನೊಂದಿಗೆ ಮಲಗಿದ್ದ ಮಗುವನ್ನು ಅಪಹರಿಸಿ ಅತ್ಯಾಚಾರ; ವ್ಯಕ್ತಿ ಬಂಧನ

ಪಿಟಿಐ
Published 5 ಜನವರಿ 2021, 6:33 IST
Last Updated 5 ಜನವರಿ 2021, 6:33 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಪಲ್ಗಾರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವುದಾಗಿ ಮಂಗಳವಾರಪೊಲೀಸರು ತಿಳಿಸಿದ್ದಾರೆ.

ಶನಿವಾರ ಘಟನೆ ನಡೆದಿದ್ದು, ತಲಸಾರಿ ತಾಲೂಕಿನ ಗ್ರಾಮವೊಂದರ ಗುಡಿಸಲಿನಲ್ಲಿ ತನ್ನ ತಾಯಿಯೊಂದಿಗೆ ಮಲಗಿದ್ದ ಬಾಲಕಿಯನ್ನು 38 ವರ್ಷದ ಆರೋಪಿ ಕರೆದೊಯ್ದಿದ್ದಾನೆ.

ಆರೋಪಿ ಮಗುವನ್ನು ಅಪಹರಿಸಿ ಹತ್ತಿರದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ನಂತರ ಬಾಲಕಿಯನ್ನು ಸ್ಥಳದಲ್ಲಿಯೇ ಬಿಟ್ಟು ಆತ ಪರಾರಿಯಾಗಿದ್ದಾನೆ ಎಂದು ತಲಸಾರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಜಯ್ ವಾಸವೆ ತಿಳಿಸಿದ್ದಾರೆ.

ADVERTISEMENT

ಬಳಿಕ, ಆಕೆಯನ್ನು ಹೊಲದಲ್ಲಿ ಕಂಡ ಮಗುವಿನ ಪೋಷಕರು ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ದಿದ್ದು, ಸದ್ಯ ಅಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಶ್ವಾನ ದಳದ ನೆರವು ಪಡೆದ ಪೊಲೀಸರು, ಘಟನಾ ಸ್ಥಳದಲ್ಲಿ ದೊರೆತ ಚಪ್ಪಲಿ ಗುರುತಿನ ಆಧಾರದ ಮೇಲೆ ನೆರೆಯ ಕೇಂದ್ರಾಡಳಿತ ಪ್ರದೇಶ ದಮನ್‌ನ ಕಾರ್ಖಾನೆಯೊಂದರಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಆತನ ವಿರುದ್ಧ ಅತ್ಯಾಚಾರ, ಅಪಹರಣ ಮತ್ತು ಪೋಕ್ಸೊ(ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.