ADVERTISEMENT

ಮಹಾರಾಷ್ಟ್ರದ ಎನ್‌ಸಿಪಿ ಸಚಿವರಿಗೆ ಕೋವಿಡ್‌ ದೃಢ

ಪಿಟಿಐ
Published 12 ಜೂನ್ 2020, 9:18 IST
Last Updated 12 ಜೂನ್ 2020, 9:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದ ಸಂಪುಟ ಸಚಿವರೊಬ್ಬರಿಗೆ ಕೋವಿಡ್ ಇರುವುದು ದೃಢಪಟ್ಟಿದೆ ಎಂದು ಶುಕ್ರವಾರ ಮೂಲಗಳು ತಿಳಿಸಿವೆ. ಅವರು ಎನ್‌ಸಿಪಿಗೆ ಸೇರಿದವರು ಎಂದು ಗೊತ್ತಾಗಿದೆ.

ಮರಾಠವಾಡ ಮೂಲದ ಸಚಿವರಾದ ಅವರು, ಕಳೆದ ವಾರ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು.

ಅವರಿಗೆ ಕೋವಿಡ್‌ ಸೋಂಕು ತಗುಲಿರುವುದು ಗುರುವಾರ ತಡರಾತ್ರಿ ಪರೀಕ್ಷಾ ವರದಿಯಿಂದ ಗೊತ್ತಾಗಿದೆ. ಕೂಡಲೇ ಅವರನ್ನು ಮತ್ತು ಅವರೊಂದಿಗೆ ಸಂಪರ್ಕ ಹೊಂದಿದ್ದ ಸಿಬ್ಬಂದಿ ಹಾಗೂ ಸಂಬಂಧಿಕರನ್ನು ಮುಂಬೈನಲ್ಲಿ ಕ್ವಾರಂಟೈನ್‌ನಲ್ಲಿ ಇಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಮಹಾರಾಷ್ಟ್ರದ ಸಂಪುಟ ಸಚಿವರಾದ ಅಶೋಕ್ ಚವಾನ್ (ಕಾಂಗ್ರೆಸ್) ಮತ್ತು ಜಿತೇಂದ್ರ ಅವಾದ್ (ಎನ್‌ಸಿಪಿ) ಅವರಿಗೆ ಈ ಹಿಂದೆ ಕೋವಿಡ್‌ ದೃಢಪಟ್ಟಿತ್ತು. ಅವರಿಬ್ಬರೂ ಈ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.