ADVERTISEMENT

ಮಹಾರಾಷ್ಟ್ರ ವಿಧಾನಸಭೆಯಲ್ಲಿ ರೈತರ ಸಮಸ್ಯೆ ಚರ್ಚೆ ವೇಳೆ ರಮ್ಮಿ ಆಡಿದ ಕೃಷಿ ಸಚಿವ!

ಪಿಟಿಐ
Published 20 ಜುಲೈ 2025, 10:49 IST
Last Updated 20 ಜುಲೈ 2025, 10:49 IST
<div class="paragraphs"><p>ಕೃಷಿ ಸಚಿವ ಮಾಣಿಕ್‌ರಾವ್ ಕೊಕಾಟೆ ಅವರು ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿರುವ ದೃಶ್ಯ</p></div>

ಕೃಷಿ ಸಚಿವ ಮಾಣಿಕ್‌ರಾವ್ ಕೊಕಾಟೆ ಅವರು ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿರುವ ದೃಶ್ಯ

   

Credit: X/@RRPSpeaks

ನಾಗ್ಪುರ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕೃಷಿ ಸಚಿವ ಮಾಣಿಕ್‌ರಾವ್ ಕೊಕಾಟೆ ಅವರು ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್ ಅವರು ಈ ವಿಡಿಯೊವನ್ನು ‘ಎಕ್ಸ್‌’ನಲ್ಲಿ ಹಂಚಿಕೊಂಡಿದ್ದು, ಆಡಳಿತಾರೂಢ ‘ಮಹಾಯುತಿ’ ಮೈತ್ರಿಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ADVERTISEMENT

‘ರಾಜ್ಯದಲ್ಲಿ ಕೃಷಿಗೆ ಸಂಬಂಧಿಸಿದ ಹಲವಾರು ಸಮಸ್ಯೆಗಳಿವೆ. ರಾಜ್ಯದಲ್ಲಿ ಪ್ರತಿದಿನ ಎಂಟು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಯಾವುದೇ ಕೆಲಸವಿಲ್ಲದ ಕೃಷಿ ಸಚಿವರು (ಮಾಣಿಕ್‌ರಾವ್ ಕೊಕಾಟೆ) ರಮ್ಮಿ ಆಡುವುದರಲ್ಲಿ ನಿರತರಾಗಿದ್ದಾರೆ’ ಎಂದು ರೋಹತ್ ಪವಾರ್ ಟೀಕಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ವಿಜಯ್ ವಡೆಟ್ಟಿವಾರ್ ಮಾತನಾಡಿ, ‘ರಾಜ್ಯದಲ್ಲಿ ರೈತರು ನಿರಂತರವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇತ್ತ ಕೃಷಿ ಸಚಿವರು ತಮ್ಮ ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದಾರೆ. ಮಹಾಯುತಿ ಸರ್ಕಾರವು ರೈತರ ಬಗ್ಗೆ ಕಾಳಜಿ ವಹಿಸುವುದಿಲ್ಲ. ಬದಲಾಗಿ ರೈತರನ್ನು ವಂಚಿಸುತ್ತಿದೆ’ ಎಂದು ಕುಟುಕಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಢಣವೀಸ್‌ ಮತ್ತು ಶಿವಸೇನಾ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಮುಂಬೈನ ಹೋಟೆಲ್‌ನಲ್ಲಿ ಭೇಟಿಯಾಗಿದ್ದರು ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ವಿಜಯ್, ಇಬ್ಬರೂ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಉದ್ದೇಶದಿಂದ ಹೋಟೆಲ್‌ನಲ್ಲಿದ್ದರು. ಬದಲಾಗಿ ಅವರಿಬ್ಬರು ಭೇಟಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.