ADVERTISEMENT

ಬಂಡಾಯ ಶಾಸಕರ ದ್ರೋಹವನ್ನು ಮರೆಯುವುದಿಲ್ಲ: ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಜೂನ್ 2022, 13:30 IST
Last Updated 25 ಜೂನ್ 2022, 13:30 IST
ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ
ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ   

ಮುಂಬೈ: ಶಿವಸೇನಾ ಬಂಡಾಯ ಶಾಸಕರ ವಿರುದ್ಧ ಹರಿಹಾಯ್ದಿರುವ ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ, ‘ಇದು ಸುಳ್ಳು ಹಾಗೂ ಸತ್ಯದ ನಡುವಿನ ಯುದ್ಧ’ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಇಂದು ನಡೆದ ಸಭೆಯಲ್ಲಿ ಏನು ಚರ್ಚಿಸಲಾಗಿದೆ ಎಂದು ನಿಮಗೆ ಈಗಾಗಲೇ ತಿಳಿದಿದೆ. ಇದರಲ್ಲಿ ಪ್ರಮುಖ ವಿಚಾರವೆಂದರೆ, ಬಂಡಾಯ ಶಾಸಕರು ಮಾಡಿದ ದ್ರೋಹವನ್ನು ನಾವು ಮರೆಯುವುದಿಲ್ಲ. ಈ ಯುದ್ಧದಲ್ಲಿ ನಾವು ಖಂಡಿತವಾಗಿ ಗೆಲ್ಲುತ್ತೇವೆ’ ಎಂದು ಹೇಳಿದ್ದಾರೆ.

ಸದ್ಯ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿದ್ದು, ಸಚಿವ ಏಕನಾಥ ಶಿಂಧೆ ನೇತೃತ್ವದಲ್ಲಿ ಶಿವಸೇನಾದ ಕನಿಷ್ಠ 38 ಶಾಸಕರು ಮತ್ತು 10 ಪಕ್ಷೇತರರು ಅಸ್ಸಾಂನ ಗುವಾಹಟಿಯ ಹೋಟೆಲ್‌ವೊಂದರಲ್ಲಿ ಬೀಡುಬಿಟ್ಟಿದ್ದಾರೆ.

ADVERTISEMENT

ಬಂಡಾಯ ಶಾಸಕರ ಅನರ್ಹತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಸೇನಾ ತಿಳಿಸಿದೆ.

ಇವನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.