ಮುಂಬೈ: 16 ಶಾಸಕರ ಅನರ್ಹತೆ ಬಗ್ಗೆ ಆದಷ್ಟು ಶೀಘ್ರವೇ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ರಾಹುಲ್ ನರ್ವೇಕರ್ ಅವರನ್ನು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಆಗ್ರಹಿಸಿದ್ದಾರೆ.
16 ಶಾಸಕರಿಗೆ ಲಭಿಸಿದ ಜೀವದಾನ ತಾತ್ಕಾಲಿಕವಷ್ಟೇ. ಸುಪ್ರೀಂ ಕೋರ್ಟ್ ಸರಿಯಾದ ಸಮಯದಲ್ಲಿ ತೀರ್ಪು ನೀಡಿದೆ. ಸ್ಪೀಕರ್ ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳಬೇಕು‘ ಎಂದು ಉದ್ಧವ್ ಹೇಳಿದ್ದಾರೆ.
ಈ ಬಗ್ಗೆ ಸ್ಪೀಕರ್‌ಗೆ ಪತ್ರ ಬರೆಯುವುದಾಗಿ ಠಾಕ್ರೆ ಬಣದ ಶಾಸಕ ಅನಿಲ್ ಪರಾಬ್ ಹೇಳಿದ್ದಾರೆ.
ಕಳೆದ ವರ್ಷ ಏಕನಾಥ ಶಿಂದೆ ನೇತೃತ್ವದಲ್ಲಿ ಶಿವಸೇನೆಯ ಶಾಸಕರು ಬಂಡಾಯ ಎದ್ದು, ಬಿಜೆಪಿಗೆ ಬೆಂಬಲ ಘೋಷಿಸಿದ್ದರು. ಈ ಪ್ರಕರಣ ಸಂಬಂಧ ಏಕನಾಥ ಶಿಂಧೆ ಹಾಗೂ 15 ಶಾಸಕರನ್ನು ಅನರ್ಹಗೊಳಿಸಬೇಕು ಎಂದು, ಮಹಾವಿಕಾಸ ಅಘಾಡಿ ಸರ್ಕಾರವನ್ನು ಮರುಸ್ಥಾಪನೆ ಮಾಡಬೇಕು ಎಂದು ಕೋರಿ ಉದ್ಧವ್ ಠಾಕ್ರೆ ಬಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಗುರುವಾರ ಪ್ರಕರಣ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್, ಉದ್ಧವ್ ಠಾಕ್ರೆ ವಿಶ್ವಾಸಮತ ಸಾಬೀತು ಪಡಿಸದೆ ರಾಜೀನಾಮೆ ನೀಡಿದ್ದರಿಂದ ಸರ್ಕಾರವನ್ನು ಮರುಸ್ಥಾಪಿಸಲಾಗದು ಎಂದು ಹೇಳಿತ್ತು. ಅಲ್ಲದೇ ಶಾಸಕರ ಅನರ್ಹತೆ ಕುರಿತು ಆದಷ್ಟು ಬೇಗ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸ್ಪೀಕರ್‌ಗೆ ಸೂಚನೆ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.