ADVERTISEMENT

ಮಹಾರಾಷ್ಟ್ರ ಪರಿಷತ್‌ ಚುನಾವಣೆ: ಉದ್ಧವ್‌ ಠಾಕ್ರೆ ಹಾದಿ ಸುಗಮ

ಮಹಾರಾಷ್ಟ್ರ ವಿಧಾನ ಪರಿಷತ್‌ನ 9 ಸ್ಥಾನಗಳಿಗೆ ಚುನಾವಣೆ

​ಪ್ರಜಾವಾಣಿ ವಾರ್ತೆ
Published 11 ಮೇ 2020, 1:55 IST
Last Updated 11 ಮೇ 2020, 1:55 IST
   

ಮುಂಬೈ: ಪಕ್ಷದ ಒಬ್ಬ ಅಭ್ಯರ್ಥಿಯ ನಾಮಪತ್ರವನ್ನು ಹಿಂತೆಗೆದುಕೊಳ್ಳುವುದಾಗಿ ಕಾಂಗ್ರೆಸ್‌ ಹೇಳಿರುವುದರಿಂದ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಅವಿರೋಧವಾಗಿ ಮಹಾರಾಷ್ಟ್ರ ವಿಧಾನಪರಿಷತ್‌ಗೆ ಆಯ್ಕೆಯಾಗುವುದು ಬಹುತೇಕ ಖಚಿತವಾದಂತಾಗಿದೆ.

‘ಪಕ್ಷದ ಅಭ್ಯರ್ಥಿಯಾಗಿ ರಾಜೇಶ್‌ ರಾಠೋಡ್‌ ಅವರು ಕಣಕ್ಕೆ ಇಳಿಯುವರು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಯ ಉಸ್ತುವಾರಿ ಮುಕುಲ್‌ ವಾಸ್ನಿಕ್‌ ಅವರು ಮೊದಲೇ ಹೇಳಿದ್ದರು. ಆದರೆ ಪಕ್ಷದ ಮುಖಂಡ ರಾಜಕಿಶೋರ್‌ ಪಾಪಾ ಮೋದಿ ಅವರೂ ನಾಮಪತ್ರ ಸಲ್ಲಿಸಿದ್ದರಿಂದ ಗೊಂದಲ ಸೃಷ್ಟಿಯಾಗಿತ್ತು.

‘ನಮ್ಮ ಪಕ್ಷದ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂತೆಗೆದುಕೊಳ್ಳಲಿದ್ದಾರೆ’ ಎಂದು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಬಾಳಾಸಾಹಬ್ ಥೋರಟ್‌ ಸ್ಪಷ್ಟಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.